ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಹಾನ್ ಚೇತನಗಳ ಚಿಂತನೆ ನಿರಂತರವಾಗಿರಲಿ’

ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆ
Last Updated 27 ಜುಲೈ 2018, 13:09 IST
ಅಕ್ಷರ ಗಾತ್ರ

ಶಿರಸಿ: ಮಹಾನ್ ವ್ಯಕ್ತಿಗಳ ಬರಹಗಳು, ಸಾಧನೆಗಳ ಬಗ್ಗೆ ಅಧ್ಯಯನ ನಡೆಯಬೇಕು. ಹಾಗಾದಾಗ ಇಂತಹ ಚೇತನಗಳ ಚಿಂತನೆ ನಿರಂತರವಾಗಿ ಹರಿಯುತ್ತದೆ ಎಂದು ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ತಾಲ್ಲೂಕು ಆಡಳಿತ, ನಗರಸಭೆ, ತಾಲ್ಲೂಕು ಪಂಚಾಯ್ತಿ ಹಾಗೂ ವಿವಿಧ ಸಂಘ–ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಇಲ್ಲಿ ಆಯೋಜಿಸಿದ್ದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು. ಶಿಥಿಲಗೊಂಡ ಸಾಮಾಜಿಕ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರಬೇಕೆಂದು ಬಸವಣ್ಣನವರು ಹೋರಾಟ ಆರಂಭಿಸಿದರು. ಅವರೊಟ್ಟಿಗೆ ಬೆಳೆದು ಬಂದವರು ಹಡಪದ ಅಪ್ಪಣ್ಣ. ವಚನಕಾರರಾಗಿದ್ದ ಅಪ್ಪಣ್ಣನವರು ಸಾಕಷ್ಟು ಸಾಮಾಜಿಕ ಅಡೆತಡೆಗಳನ್ನು ಎದುರಿಸಿ ಯಶ ಸಾಧಿಸಿದವರು ಎಂದರು.

‘ರಥ ಸಪ್ತಮಿಯಂದು ಸವಿತಾ ಮಹರ್ಷಿ ಜಯಂತಿಯನ್ನು ಆಚರಿಸುವ ಬಗ್ಗೆ ಸವಿತಾ ಸಮಾಜದವರು ಒತ್ತಾಯ ಮಾಡಿದ್ದಾರೆ. ಈ ಕುರಿತು ಸರ್ಕಾರದ ಪ್ರಮುಖರ ಜತೆ ಮಾತನಾಡುತ್ತೇನೆ’ ಎಂದು ಭರವಸೆ ನೀಡಿದರು.

ಜಿಲ್ಲಾ ಪಂಚಾಯ್ತಿ ಸದಸ್ಯ ಬಸವರಾಜ ದೊಡ್ಮನಿ ಮಾತನಾಡಿ, ವಚನ ಸಾಹಿತ್ಯದ ಮೂಲಕ ಉದಾತ್ತ ಚಿಂತನೆಗಳನ್ನು ಸಮಾಜಕ್ಕೆ ನೀಡಿದವರು ಹಡಪದ ಅಪ್ಪಣ್ಣ ಎಂದರು. ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಜಿ.ಎನ್.ಹೆಗಡೆ, ಉಷಾ ಹೆಗಡೆ ಇದ್ದರು. ತಹಶೀಲ್ದಾರ್ ಎಂ.ಆರ್.ಕುಲಕರ್ಣಿ ಸ್ವಾಗತಿಸಿದರು. ಶ್ರೀಧರ ಹೆಗಡೆ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT