ಹಳಿಯಾಳ: ಗ್ರಾಮೀಣ ಪ್ರದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಬ್ಯಾಂಕ್ಗಳ ಪಾತ್ರ ಮಹತ್ವದ್ದಾಗಿದ್ದು, ನೂತನ ಅಧಿಕಾರಿಗಳು ಗ್ರಾಮೀಣ ಜನರೊಂದಿಗೆ ಸಮನ್ವಯ ಸಾಧಿಸಿ ಕಾರ್ಯ ನಿರ್ವಹಿಸಬೇಕು ಎಂದು ಕೆನರಾ ಬ್ಯಾಂಕ್ನ ಲೀಡ್ ಜಿಲ್ಲಾ ವ್ಯವಸ್ಥಾಪಕ ರಾಜಪ್ಪ ಗೌಳಿ ಹೇಳಿದರು.

ಕೆನರಾ ಬ್ಯಾಂಕ್ ದೇಶಪಾಂಡೆ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (ಸಿಬಿಡಿಆರ್ ಸೆಟಿ) ಹಾಗೂ ಕೆನರಾ ಬ್ಯಾಂಕ್ ವೃತ್ತ ಕಚೇರಿ, ಹುಬ್ಬಳ್ಳಿ ಸಂಯುಕ್ತ ಆಶ್ರಯದಲ್ಲಿ ಈಚೆಗೆ ನಡೆದ ನೂತನವಾಗಿ ನೇಮಕಗೊಂಡ ಪ್ರೊಬೆಷನರಿ ಕೃಷಿ ವಿಸ್ತರಣಾ ಅಧಿಕಾರಿಗಳಿಗೆ ಪಾದಾರ್ಪಣ ಗ್ರಾಮೀಣ ಅವಗಾಹನಾ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಹಣಕಾಸಿನ ಅವಲೋಕನ, ಪ್ರಾಥಮಿಕ ವಲಯ ಸಾಲ, ಪ್ರಧಾನಮಂತ್ರಿ ಜನಧನ್ ಯೋಜನೆ ಹಾಗೂ ಹಣಕಾಸು ಒಳಗೊಳ್ಳುವಿಕೆಯ ಗುರಿಗಳ ಕುರಿತು ಸಮಗ್ರ ಮಾಹಿತಿ ನೀಡಿದರು.

ಐದು ದಿನಗಳ ಈ ವಿಶೇಷ ಕಾರ್ಯಕ್ರಮದಲ್ಲಿ ತರಬೇತಿಗಾರರಿಗೆ ಗ್ರಾಮೀಣ ಜೀವನ, ಸಾಮಾಜಿಕ ಹಾಗೂ ಆರ್ಥಿಕ ಪರಿಸ್ಥಿತಿಗಳ ಕುರಿತು ಪ್ರಾಯೋಗಿಕ ಅರಿವು ಮೂಡಿಸುವ ಉದ್ದೇಶದಿಂದ ವಿವಿಧ ವಿಷಯಗಳ ಕುರಿತು ಉಪನ್ಯಾಸಗಳು ಹಾಗೂ ಕ್ಷೇತ್ರ ಭೇಟಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ನಾಬಾರ್ಡ್, ಕಾರವಾರದ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ಸುಶೀಲಕುಮಾರ ನಾಯ್ಕ ತರಬೇತಿಗಾರರೊಂದಿಗೆ ಸಂವಾದ ನಡೆಸಿದರು.

ಕೆನರಾ ಬ್ಯಾಂಕ್ ವೃತ್ತ ಕಚೇರಿ, ಹುಬ್ಬಳ್ಳಿಯ ಹಿರಿಯ ವ್ಯವಸ್ಥಾಪಕ ಯಮನಪ್ಪ ಹಾಲವರ, ಸಿಬಿಡಿಆರ್ ಸೆಟಿ ನಿರ್ದೇಶಕ ಕಿರಣಕುಮಾರ ಬಾಗಡೆ ಹಾಗೂ ಯೋಜನಾ ಸಂಯೋಜಕರಾದ ವಿನಾಯಕ ಎ. ಚವಾಣ ಇದ್ದರು. ಒಟ್ಟು 49 ಬ್ಯಾಂಕ್ ಅಧಿಕಾರಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-20-64078951

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.