ಹಳಿಯಾಳ: ‘ಯಾವುದೇ ಗ್ರಾಮವು ಮೂಲಸೌಕರ್ಯದಿಂದ ವಂಚಿತವಾಗದರಿಲಿ ಎಂದು ಸರ್ಕಾರ ಪ್ರತಿಯೊಂದು ಗ್ರಾಮದಲ್ಲಿ ಮೂಲಸೌಕರ್ಯ ಒದಗಿಸುತ್ತಿದೆ’ ಎಂದು ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.

ತಾಲ್ಲೂಕಿನ ಗರಡೋಳ್ಳಿ, ವಾಡಾ ಗ್ರಾಮದಲ್ಲಿ ಗ್ರಾಮೀಣ ಅಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆಯಿಂದ ಅನಿರ್ಬಂಧಿತ ಹಾಗೂ ನರೇಗಾ ಯೋಜನೆ ಅಡಿ ಸುಮಾರು ₹20 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಅಂಗನವಾಡಿ ಕಟ್ಟಡದ ಉದ್ಘಾಟನೆ ಹಾಗೂ ಕೇಸರೊಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಿಂದ ಗರಡೋಳ್ಳಿಯಲ್ಲಿ ಸಿಎಂಐಡಿಪಿ ಯೋಜನೆ ಅಡಿ ಸುಮಾರು ₹48ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

‘ಸುಮಾರು 30 ವರ್ಷಗಳ ಹಿಂದೆ ಗರಡೋಳ್ಳಿ, ವಾಡಾ ಮತ್ತಿತರ ಗ್ರಾಮಗಳಲ್ಲಿ ವಾಸಿಸುವ ಜನರಿಗೆ ಯಾವುದೇ ಮೂಲಸೌಕರ್ಯಗಳಿರಲಲ್ಲ, ಈಗ ಪ್ರತಿಯೊಬ್ಬ ನಾಗರಿಕರು ಯಾವುದೇ ಸೌಲಭ್ಯದಿಂದ ವಂಚಿತವಾಗಬಾರದೆಂದು ಪ್ರತಿ ಗ್ರಾಮಗಳಲ್ಲಿ ರಸ್ತೆ, ಕುಡಿಯುವ ನೀರು, ಪ್ರಾಥಮಿಕ ಶಿಕ್ಷಣ, ಆರೋಗ್ಯ ಕೇಂದ್ರ ಮತ್ತಿತರ ಸೌಲಭ್ಯ ನೀಡಲಾಗುತ್ತಿದೆ’ ಎಂದರು.

‘ಹಳಿಯಾಳ ತಾಲ್ಲೂಕು ಸಾಕಷ್ಟುಅಭಿವೃದ್ಧಿಯಾಗಿದೆ. ಪ್ರತಿಯೊಬ್ಬ ಮಗುವಿಗೆ ಉತ್ತಮ ಶಿಕ್ಷಣ, ಆರೋಗ್ಯ ನೀಡಿ. ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಜನರಿಗೆ ಸ್ವಾವಲಂಬಿ ಬದುಕನ್ನು ರೂಪಿಸುತ್ತಿದೆ. ಹಳಿಯಾಳ, ದಾಂಡೇಲಿ ಮತ್ತು ಜೋಯಿಡಾ ಭಾಗದಲ್ಲಿ ಕಾಳಿನದಿ ಹಾಗೂ ಪಾಂಡರಿ ನದಿಯ ವರದಾನದಿಂದ ಕುಡಿಯುವ ನೀರಿನ ಯೋಜನೆ ಜಾರಿಗೆ ತಂದು ಈಗಾಗಲೇ ಹಲವಾರು ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆ ಪ್ರಾರಂಭವಾಗಿದೆ’ ಎಂದು ತಿಳಿಸಿದರು.

ಕ್ಷೇತ್ರದಲ್ಲಿಯ ಎಲ್ಲ ಗ್ರಾಮಗಳಲ್ಲಿಯೂ ದಿನದ 24 ಗಂಟೆ ನೀರು ಸರಬರಾಜು ಯೋಜನೆ ಶೀಘ್ರದಲ್ಲಿ ಪ್ರಾರಂಭವಾಗಲಿದೆ. ಪ್ರತಿ ಮಹಿಳೆಯರು ಶೈಕ್ಷಣಿಕ ಅಭಿವೃದ್ಧಿ ಹೊಂದುತ್ತಿದ್ದು ಪ್ರತಿಯೊಬ್ಬ ನಾಗರಿಕನಲ್ಲಿ ನಿಷ್ಠೆ ಮತ್ತು ಕರ್ತವ್ಯ ಎರಡು ಪ್ರಮುಖವಾದದ್ದು. ಬೇಡಿಕೆಗೆ ಅನುಗುಣವಾಗಿ ಪ್ರತಿಯೊಂದು ಗ್ರಾಮದಲ್ಲಿ ಹಂತ ಹಂತವಾಗಿ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ’ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪಾಟೀಲ, ಮುಖಂಡ ಅಂತೋನ ಡಿಗ್ಗೆಕರ, ಸಂಜು ಕಾಮ್ರೇಕರ, ಜೂಲಿಯಾನಾ ಸಿದ್ದಿ, ತಾಲ್ಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತಿತರರು ಪಾಲ್ಗೊಂಡಿದ್ದರು.

ರಾಯ ಪಟ್ಟಣ ಹಾಗೂ ಕ್ಯಾತನಗೇರಾ ಗ್ರಾಮದಲ್ಲಿ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ಅನುದಾನದಡಿ ಮಂಜೂರಾದ ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆ ಹಾಗೂ ಹಿರಿಯ ಪ್ರಾಥಮಿಕ ಶಾಲಾ ಕೊಠಡಿಯನ್ನು ಶಾಸಕ ಆರ್.ವಿ.ದೇಶಪಾಂಡೆ ಉದ್ಘಾಟಿಸಿದರು. ಮುಖಂಡ ಕೃಷ್ಣಾ ಪಾಟೀಲ, ಸಂಜು ಪಾಟೀಲ ಜ್ಯೋತಿಬಾ, ಮಾತ್ರು ವಾಲೇಕರ, ಪರಶುರಾಮ ಮೆಕಾದಾರ, ಭುವನೇಶ್ವರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-20-1374388878

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.