ಹಳಿಯಾಳ: ತಾಲ್ಲೂಕಿನ ಮಾವು ಬೆಳೆಗಾರರಿಗೆ ಪ್ರಕೃತಿ ವಿಕೋಪದಿಂದ ಉಂಟಾದ ನಷ್ಟಕ್ಕೆ ತುರ್ತು ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕಬ್ಬು ಬೆಳೆಗಾರರ ಹಿತ ಸಂರಕ್ಷಣಾ ಸಮಿತಿಯಿಂದ ತಹಶೀಲ್ದಾರ್ ಫಿರೋಜಷಾ ಸೋಮನಕಟ್ಟಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.

‘ತಾಲ್ಲೂಕಿನಲ್ಲಿ ಸಾವಿರಾರು ರೈತರು ಮಾವು ಬೆಳೆಯನ್ನು ಅವಲಂಬಿಸಿಕೊಂಡು ಜೀವನ ನಡೆಸುತ್ತಿದ್ದು, ತಾಲ್ಲೂಕಿನ ಸುಮಾರು 1,000 ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತಿದೆ. ಈ ವರ್ಷ ನಿರಂತರ ಹವಾಮಾನ ವೈಪರೀತ್ಯದಿಂದ ಹೆಚ್ಚಿನ ಪ್ರಮಾಣದಲ್ಲಿ ಮಾವು ಬೆಳೆ ಹಾನಿಗೊಳಗಾಗಿದೆ. ಇತ್ತೀಚೆಗೆ ಸುರಿದ ಭಾರಿ ಗಾಳಿ, ಗುಡುಗು, ಮಿಂಚು ಸಹಿತ ಮಳೆಯಿಂದಾಗಿ ಉಳಿದಿದ್ದ ಮಾವಿನ ಹಣ್ಣುಗಳು ನೆಲಕ್ಕುರುಳಿ ಸಂಪೂರ್ಣ ನಾಶವಾಗಿವೆ. ರೈತರು ಗೊಬ್ಬರ, ಔಷಧ, ಕಾರ್ಮಿಕ ವೆಚ್ಚ ಸೇರಿದಂತೆ ಲಕ್ಷಾಂತರ ರೂಪಾಯಿ ಹೂಡಿಕೆ ಮಾಡಿದ್ದು, ಸಂಕಷ್ಟಕ್ಕೆ ಸಿಲುಕಿದ್ದಾರೆ. ಬ್ಯಾಂಕ್ ಸಾಲ, ಖಾಸಗಿ ಸಾಲ ಹಾಗೂ ಕುಟುಂಬ ನಿರ್ವಹಣೆಯ ಒತ್ತಡದಿಂದ ಅನೇಕ ರೈತರು ಮಾನಸಿಕವಾಗಿ ಕುಗ್ಗುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಮನವಿಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

‘ತಾಲ್ಲೂಕಿನ ಎಲ್ಲಾ ಮಾವಿನ ತೋಟಗಳ ಸಮಗ್ರ ಬೆಳೆ ಹಾನಿ ಸಮೀಕ್ಷೆ ನಡೆಸಬೇಕು. ಪ್ರತಿ ಹೆಕ್ಟೇರ್ಗೆ ಸಮರ್ಪಕ ಪರಿಹಾರ ಘೋಷಿಸಿ ರೈತರ ಖಾತೆಗೆ ಜಮಾ ಮಾಡಬೇಕು. ಬೆಳೆ ವಿಮೆ ಹೊಂದಿರುವ ರೈತರಿಗೆ ಶೀಘ್ರ ಪರಿಹಾರ ದೊರಕುವಂತೆ ಕ್ರಮ ಕೈಗೊಳ್ಳಬೇಕು. ರೈತರ ಬ್ಯಾಂಕ್ ಸಾಲಗಳ ಮರುಪಾವತಿಗೆ ಅವಧಿ ವಿಸ್ತರಣೆ ಹಾಗೂ ಬಡ್ಡಿ ಮನ್ನಾ ಮಾಡಬೇಕು. ಮಾವು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ ಆರ್ಥಿಕ ಪುನಶ್ಚೇತನಕ್ಕೆ ಸರ್ಕಾರ ನೆರವಾಗಬೇಕು’ ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಕಬ್ಬು ಬೆಳೆಗಾರರ ಹಿತ ರಕ್ಷಣಾ ಸಮಿತಿಯ ಅಧ್ಯಕ್ಷ ನಾಗೇಂದ್ರ ಜಿವೋಜಿ, ಮುಖಂಡರಾದ ರಾಮದಾಸ ಬೆಳಗಾಂವಕರ, ಸಾತುರಿ ಗೋಡಿಮನಿ, ನಕುಲ ಕೆಚ್ಚನವರ, ಮಹೇಶ್ ಪಾಳೇಕರ, ಶಾಂತಾರಾಮ ಸೂರ್ಯವಂಶಿ ನೇತೃತ್ವ ವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-20-1957746566

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.