ಹಳಿಯಾಳ: ‘ತ್ವರಿತ ಆಡಳಿತ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಭೂ ದಾಖಲೆಯನ್ನು ಗಣಕೀಕರಣಗೊಳಿಸಲಾಗುತ್ತಿದೆ. ಇದರಿಂದ ಹಳೆಯ ದಾಖಲೆಗಳ ಸಂರಕ್ಷಣೆ ಹಾಗೂ ನೇರವಾಗಿ ಡಿಜಿಟಲ್ ಮಾಧ್ಯಮದಿಂದ ಭೂ ದಾಖಲೆಗಳನ್ನು ಪಡೆದುಕೊಳ್ಳುವ ಸೌಲಭ್ಯ ಕಲ್ಪಿಸಲಾಗುವುದು’ ಎಂದು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ, ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.

ಇಲ್ಲಿನ ತಹಶೀಲ್ದಾರ್ ಕಾರ್ಯಾಲಯದಲ್ಲಿ ಭೂ ಸುರಕ್ಷಾ ಯೋಜನೆ ಅಡಿಯಲ್ಲಿ ಕಂದಾಯ ದಾಖಲೆಗಳನ್ನು ಗಣಿಕೀಕರಣಗೊಳಿಸುವ ಕಾರ್ಯಕ್ಕೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.

ಕಂದಾಯ ಇಲಾಖೆಯ ರೆಕಾರ್ಡ್ ರೂಮ್ ಅನ್ನು ಪರಿಶೀಲಿಸಿದ ದೇಶಪಾಂಡೆ, ಭೂ ದಾಖಲೆಗಳ ಸಂಗ್ರಹಿಸಿ ಕಾಯಂ ಆಗಿ ಯಾವುದೇ ರೀತಿಯಿಂದ ಹಾಳಾಗದಂತೆ ಇಡುವ ಕುರಿತು ಸಲಹೆ ನೀಡಿದರು.

1927ನೇ ಸಾಲಿನಿಂದ ಹಳೆಯ ದಾಖಲೆಗಳ ಸ್ಕ್ಯಾನ್ ಮಾಡುವ ಬಗೆಯನ್ನು ತಹಶೀಲ್ದಾರ್ ಪ್ರವೀಣ್ ಹುಚ್ಚಣ್ಣವರ ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.