ಹಳಿಯಾಳ: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಹಂಗಾಮಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕೆರೆ, ಹಳ್ಳಕೊಳ್ಳ ನೀರಿಲ್ಲದೆ ಬತ್ತಿ ರೈತರ ಬೆಳೆ ಕುಂಠಿತವಾಗಿದೆ. ರೈತರ ಹಿತದೃಷ್ಟಿಯಿಂದ ಹಳಿಯಾಳ ತಾಲ್ಲೂಕನ್ನು ‘ಬರಪೀಡಿತ’ ತಾಲ್ಲೂಕು ಎಂದು ಘೋಷಣೆ ಮಾಡಬೇಕು ಎಂದು ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಾಜಿ ನರಸಾನಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಈಚೆಗೆ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ ಅವರು ಯಲ್ಲಾಪುರ, ಮುಂಡಗೋಡ ವಿಧಾನಸಭಾ ಕ್ಷೇತ್ರ ಹಾಗೂ ಶಿರಸಿ, ಯಲ್ಲಾಪುರ, ಮುಂಡಗೋಡ, ಜೋಯಿಡಾ ತಾಲ್ಲೂಕನ್ನು ಬರ ಪೀಡಿತ ಪ್ರದೇಶ ಅಂತ ಘೋಷಣೆ ಮಾಡಲು ವಿಧಾನಸಭೆಯಲ್ಲಿ ಆಗ್ರಹಿಸಿದ್ದಾರೆ. ಸ್ಥಳೀಯ ಶಾಸಕ ಆರ್.ವಿ.ದೇಶಪಾಂಡೆ ಸಹ ಅಧಿವೇಶನದಲ್ಲಿ ಈ ಬಗ್ಗೆ ಧ್ವನಿ ಎತ್ತಿ ಹಳಿಯಾಳ ತಾಲ್ಲೂಕು ಹಾಗೂ ಜಿಲ್ಲೆಯ ಮತ್ತಿತರ ತಾಲ್ಲೂಕುಗಳನ್ನು ‘ಬರಪೀಡಿತ’ ಎಂದು ಘೋಷಿಸಿ ವಿಶೇಷ ಅನುದಾನ ಮಂಜೂರು ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.