ಹಳಿಯಾಳ: ವಿದ್ಯಾರ್ಥಿಗಳಿಗೆ ನೀಡಲಾಗುವ ಬಸ್ ಪಾಸ್ ಅವಧಿಯನ್ನು ವಿಸ್ತರಿಸುವಂತೆ ಆಗ್ರಹಿಸಿ ಹವಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತಹಶೀಲ್ದಾರ್ ಡಾ. ಎಸ್.ವಿ. ಲೋಕೇಶ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.
‘ನಮ್ಮ ಶೈಕ್ಷಣಿಕ ಅವಧಿಯ ತರಗತಿಗಳು ಇನ್ನೂ ಮುಕ್ತಾಯಗೊಂಡಿಲ್ಲ. ಜುಲೈ ತಿಂಗಳಿನಲ್ಲಿ ತರಗತಿಗಳು ಮುಕ್ತಾಯಗೊಳ್ಳಲಿದ್ದು, ಸೆಪ್ಟೆಂಬರ್‌ನಲ್ಲಿ ಅಂತಿಮ ಪರೀಕ್ಷೆ ನಡೆಯಲಿದೆ. ಅಲ್ಲಿಯ ವರೆಗೂ ಬಸ್ ಪಾಸ್ ಅವಧಿ ವಿಸ್ತರಿಸಿ ಅನುಕೂಲ ಮಾಡಿಕೊಡಬೇಕು’ ಎಂದು ವಿದ್ಯಾರ್ಥಿಗಳು ಮನವಿಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳಾದ ಸುದೀಪ ಭೋಸ್ಲೆ, ಶಶಿಧರ ದೇಸಾಯಿ, ಸುದರ್ಶನ ದೊಡ್ಡಗೌಡ, ವಿಠ್ಠಲ ಹಿಂಬೆ, ಗಜಾನಂದ, ನಾವದೇವ, ವಿನಾಯಕ, ಶಿವಾನಂದ ಜಿವೋಜಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.