ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲಿನಲ್ಲಿ ಯುವತಿಗೆ ಕಿರುಕುಳ: ಆರೋಪಿ ಬಂಧನ

Published 3 ಜನವರಿ 2024, 14:14 IST
Last Updated 3 ಜನವರಿ 2024, 14:14 IST
ಅಕ್ಷರ ಗಾತ್ರ

ಅಂಕೋಲಾ: ರೈಲಿನಲ್ಲಿ ಯುವತಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳ ಮೂಲದ ವ್ಯಕ್ತಿಯೊಬ್ಬನನ್ನು ಅಂಕೋಲಾ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಕೇರಳದ ಕಣ್ಣೂರು ಮೂಲದ ಸದ್ಯ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನೆಲೆಸಿದ್ದ ಸುಬರಾವ್ ದತ್ತಾತ್ರೇಯ ಚವ್ಹಾಣ್ (47) ಬಂಧಿತ ಆರೋಪಿ.

‘ಆರೋಪಿಯು ಮಂಗಳವಾರ ಪೂನಾ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 11098) ರೈಲಿನಲ್ಲಿ ಪ್ರಯಾಣಿಸುತ್ತಿದ್ದ ದಕ್ಷಿಣ ಭಾರತದ ರಾಜ್ಯವೊಂದರ ಯುವತಿಗೆ ಕಿರುಕುಳ ನೀಡಿದ್ದ. ರೈಲು ಮಾದನಗೇರಿ ರೈಲು ನಿಲ್ದಾಣ ದಾಟುತ್ತಿದ್ದಂತೆ ಆತ ಲೈಂಗಿಕ ಕಿರುಕುಳ ನೀಡಿದ್ದಾಗಿ ಯುವತಿ ದೂರು ನೀಡಿದ್ದರು. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT