ಶಿರಸಿ: ‘ಹಾವೇರಿ-ಶಿರಸಿ ಹೆದ್ದಾರಿ ಕಾಮಗಾರಿ ವಿಳಂಬದಿಂದ ಸಾರ್ವಜನಿಕರಿಗೆ ಸಾಕಷ್ಟು ತೊಂದರೆ ಆಗುತ್ತಿದ್ದು, ಮಳೆಗಾಲಕ್ಕೆ ಮುನ್ನ ಅಗೆದ ಜಾಗದಲ್ಲಿ ಡಾಂಬರೀಕರಣ ಮಾಡದಿದ್ದರೆ ಗುತ್ತಿಗೆದಾರರ ವಿರುದ್ಧ ಸರ್ಕಾರದ ಮಟ್ಟದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ನಗರದ ದೀನದಯಾಳ ಸಭಾಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹೆದ್ದಾರಿ ವಿಸ್ತರಣೆ ಕಾಮಗಾರಿಯಲ್ಲಿ ಗುತ್ತಿಗೆದಾರರು ಮತ್ತು ಅಧಿಕಾರಿಗಳ ನಿರ್ವಹಣೆ ವೈಫಲ್ಯದಿಂದಾಗಿ ಯೋಜನೆ ಕುಂಠಿತಗೊಂಡಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಹೆದ್ದಾರಿ ಯೋಜನೆಯನ್ನು ತ್ವರಿತವಾಗಿ ಜಾರಿಗೊಳಿಸಲು ಕಳೆದ ಎರಡು ವರ್ಷಗಳಿಂದ ಕೇಂದ್ರ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ನಿರಂತರ ಚರ್ಚೆ ನಡೆಸಲಾಗುತ್ತಿದೆ. ಅಧಿಕಾರಿಗಳ ಬೇಜವಾಬ್ದಾರಿಯಿಂದ ಸಾರ್ವಜನಿಕರು ಸಂಕಷ್ಟ ಅನುಭವಿಸುವಂತಾಗಿದ್ದು, ಮಳೆಗಾಲ ಆರಂಭವಾಗುವ ಮೊದಲೇ ರಸ್ತೆಯ ದುರಸ್ತಿ ಕಾರ್ಯ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ’ ಎಂದರು.

ಇದೇ ವೇಳೆ ರಾಜ್ಯ ಸರ್ಕಾರದ ಕಾಮಗಾರಿಗಳ ಕುರಿತು ಪ್ರತಿಕ್ರಿಯಿಸಿದ ಅವರು, ‘ಸಚಿವ ಮಂಕಾಳ ವೈದ್ಯರು ಮೊದಲು ತಮ್ಮ ವ್ಯಾಪ್ತಿಯನ್ನು ಅರಿತುಕೊಳ್ಳಲಿ ಹಾಗೂ ರಾಜ್ಯ ಸರ್ಕಾರದ ಕಾಮಗಾರಿಗಳ ಬಗ್ಗೆ ಗಮನಹರಿಸಲಿ. ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು ಜನಹಿತಕ್ಕಾಗಿ ಸಹಕರಿಸಬೇಕು’ ಎಂದು ಹೇಳಿದ ಅವರು, ‘ನಾರಿ ಶಕ್ತಿ ಮುಖ್ಯವಾಹಿನಿಗೆ ಬರಬೇಕೆಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ಕಾಯ್ದೆ ತರಲು ವಿಶೇಷ ಅಧಿವೇಶನ ನಡೆಸಿತ್ತು. ಕ್ಷೇತ್ರ ವಿಂಗಡಣೆ ಕುರಿತು ಗಂಭೀರ ಚರ್ಚೆಗಳು ನಡೆದಿದ್ದರೂ, ಕಾಂಗ್ರೆಸ್ ಪಕ್ಷವು ಮಹಿಳಾ ಮೀಸಲಾತಿಯನ್ನು ವಿರೋಧಿಸುವ ಮೂಲಕ ತನ್ನ ಮಹಿಳಾ ವಿರೋಧಿ ನೀತಿಯನ್ನು ಪ್ರದರ್ಶಿಸಿದೆ. ಬಿಜೆಪಿಯು ಏನೇ ಅಭಿವೃದ್ಧಿ ಕೆಲಸಗಳನ್ನು ಮಾಡಿದರೂ ಅದನ್ನು ವಿರೋಧಿಸುವುದೇ ಕಾಂಗ್ರೆಸ್ ಪಕ್ಷದ ಜಾಯಮಾನವಾಗಿದೆ’ ಎಂದು ಕಾಗೇರಿ ಟೀಕಿಸಿದರು. ಈ ವೇಳೆ ಪಕ್ಷದ ಪ್ರಮುಖರಾದ ರೇಖಾ ಹೆಗಡೆ, ಶರ್ಮಿಳಾ ಮಾದನಗೇರಿ ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-20-589512543

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.