ಕಾರವಾರ: ತಾಲ್ಲೂಕಿನ ಸಾವಂತವಾಡಾ ಹೋಬಳಿಯಲ್ಲಿ ಬುಧವಾರ ಗರಿಷ್ಠ ಉಷ್ಣಾಂಶ 42.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಬುಧವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ದಾಖಲಾದ ಗರಿಷ್ಠ ಮಟ್ಟದ ತಾಪಮಾನ ಇದು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ (ಕೆಎಸ್ಎನ್ಎಂಡಿಸಿ) ತಿಳಿಸಿದೆ.

ಇಲ್ಲಿನ ಘಾಡಸಾಯಿ ಹೋಬಳಿಯಲ್ಲಿ 42.3 ಡಿಗ್ರಿ ಸೆಲ್ಸಿಯಸ್, ಕಿನ್ನರ ಹೋಬಳಿ ವ್ಯಾಪ್ತಿಯಲ್ಲಿ 41.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಜಿಲ್ಲೆಯ ಕರಾವಳಿ ಭಾಗದಲ್ಲಿ ಸೆಕೆಯ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗಿದೆ.

‘ಉಷ್ಣ ಅಲೆಯ ಪರಿಣಾಮ ತಾಪಮಾನದಲ್ಲಿ ಏರಿಕೆ ಆಗುತ್ತಿದೆ. ಕರಾವಳಿ ಭಾಗದಲ್ಲಿ 37 ರಿಂದ 38 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇದ್ದು, ಮುಂದಿನ 24 ಗಂಟೆಗಳಲ್ಲಿ ಹೆಚ್ಚಿನ ಬದಲಾವಣೆ ಆಗದು’ ಎಂದು ಕೆಎಸ್ಎನ್ಎಂಡಿಸಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.