ಹೊನ್ನಾವರ: ‘ಪ್ರವಾಹ ಸೇರಿದಂತೆ ಮಳೆಗಾಲದಲ್ಲಿ ಸಂಭವಿಸಬಹುದಾದ ವಿವಿಧ ಪ್ರಕೃತಿ ವಿಕೋಪ ಘಟನೆಗಳನ್ನು ನಿಭಾಯಿಸಲು ತಾಲ್ಲೂಕಿನ 26 ಗ್ರಾಮ ಪಂಚಾಯಿತಿ ಹಾಗೂ 2 ಪಟ್ಟಣ ಪಂಚಾಯಿತಿಗಳಿಗೆ ಒಟ್ಟು 24 ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ’ ಎಂದು ತಹಶೀಲ್ದಾರ್ ಪ್ರವೀಣ ಕರಾಂಡೆ ತಿಳಿಸಿದರು.

ಇಲ್ಲಿಯ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ನಡೆದ ಮಳೆಗಾಲ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ತಾಲ್ಲೂಕಿನ 54 ಮಜರೆಗಳನ್ನು ನೆರೆ ಪೀಡಿತ ಪ್ರದೇಶಗಳೆಂದು ಗುರುತಿಸಲಾಗಿದ್ದು, ನೆರೆ ಬಂದಲ್ಲಿ ಜನರು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸಲು ಲೈಫ್ ಜಾಕೆಟ್ ಹಾಗೂ ದೋಣಿಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಕಾಳಜಿ ಕೇಂದ್ರಗಳಲ್ಲಿ ಅಗತ್ಯ ಮೂಲಸೌಕರ್ಯ ಒದಗಿಸಬೇಕು.ಪ್ರಾಕೃತಿಕ ವಿಕೋಪದಲ್ಲಿ ಜನರ ಆಸ್ತಿಗೆ ಹಾನಿ ಸಂಭವಿಸಿದರೆ ಸಮೀಕ್ಷಾ ಕಾರ್ಯವನ್ನು ಕಾಲಮಿತಿಯೊಳಗೆ ಕೈಗೊಳ್ಳಬೇಕು’ ಎಂದರು.

‘ಜೀವ ಹಾನಿಯಾದರೆ ತಕ್ಷಣ ಪರಿಹಾರ ನೀಡಬೇಕು, ಶಾಲೆ, ಅಂಗನವಾಡಿಗಳ ಗೋಡೆ, ಚಾವಣಿ ಸಮೀಪದ ಗುಡ್ಡ ಕುಸಿತ ಹಾಗೂ ಮಳೆಗಾಲದಲ್ಲಿ ವಿದ್ಯುತ್ ಅವಘಡಗಳು ಸಂಭವಿಸದಂತೆ ತಡೆಗಟ್ಟಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಮುಂಜಾಗೃತಾ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

ತಾಲ್ಲೂಕು ಪಂಚಾಯಿತಿ ಇಒ ಪುಟ್ಟೇ ಗೌಡ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಏಸು ಬೆಂಗಳೂರ, ನೋಡಲ್ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-20-456423861

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.