ಹೊನ್ನಾವರ: ‘ಹಸಿರಿನಿಂದ ಕಂಗೊಳಿಸುವ ಉತ್ತಮ ಪರಿಸರ ಧಾರ್ಮಿಕ ಶ್ರದ್ಧಾ ಕೇಂದ್ರಗಳಿಗೆ ವಿಶೇಷ ಮೆರುಗು ಕೊಡುತ್ತವೆ. ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಜೊತೆಗೆ ಪರಿಸರ ಸಂರಕ್ಷಣೆಗೂ ಆದ್ಯತೆ ನೀಡಬೇಕಿದೆ’ ಎಂದು ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ವಿ.ಕೆ. ವಿಶಾಲ್ ಅಭಿಪ್ರಾಯಪಟ್ಟರು.

ಹೆರಾವಲಿ ಗ್ರಾಮದ ಹಾಚಲಮಕ್ಕಿಯ ಕಾಮಕೋಡ ದೇವರಕಾಡಿನಲ್ಲಿರುವ ದುರ್ಗಮ್ಮ ದೇವಸ್ಥಾನದ ವರ್ಧಂತಿ ಉತ್ಸವದ ಪ್ರಯುಕ್ತ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಲೋಹಿತ್ ಜಿ. ಮಾತನಾಡಿ, ‘ದೈವತ್ವದ ನಂಬಿಕೆ ಅಡಿಯಲ್ಲಿ ಅರಣ್ಯ ಉಳಿಸುವ ಉದ್ದೇಶದೊಂದಿಗೆ ದೇವರಕಾಡು ನಿರ್ಮಿಸಿ ಪರಿಸರ ಸಂರಕ್ಷಣೆ ಕೈಗೊಳ್ಳಲಾಗಿದೆ. ಕಾಡು ಇದ್ದರೆ ಮಾತ್ರ ನಾಡು ಉಳಿಯಲು ಸಾಧ್ಯ. ಅರಣ್ಯ ಅತಿಕ್ರಮಣ ತಡೆಗಟ್ಟುವ ಅಗತ್ಯವಿದೆ’ ಎಂದು ಹೇಳಿದರು.

ಎಸ್.ಡಿ.ಎಂ. ಕಾಲೇಜಿನ ಕನ್ನಡ ಪ್ರಾಧ್ಯಾಪಕ ನಾಗರಾಜ ಹೆಗಡೆ ಮಾತನಾಡಿ, ‘ಪರಿಸರ ಪ್ರವಾಸೋದ್ಯಮದಿಂದ ಪರಿಸರದ ಮೇಲೆ ಆಗುತ್ತಿರುವ ದುಷ್ಪರಿಣಾಮ ತಡೆಗಟ್ಟಬೇಕಿದ್ದು ಸುಸ್ಥಿರ ಅಭಿವೃದ್ಧಿ ಸಾಧಿಸಬೇಕಿದೆ’ ಎಂದು ಹೇಳಿದರು.

ಯಕ್ಷಗಾನ ಅಕಾಡೆಮಿ ಸದಸ್ಯ ಹಾಗೂ ಕಲಾವಿದ ವಿದ್ಯಾಧರ ರಾವ್ ಜಲವಳ್ಳಿ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು. ದೇವಸ್ಥಾನ ಸಮಿತಿಯ ಅಧ್ಯಕ್ಷ ನೀಲಕಂಠ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ದೇವಸ್ಥಾನ ಸಮಿತಿಯ ಗಂಗಾಧರ ನಾಯ್ಕ, ಎಚ್.ಎಲ್. ಗುರುದತ್ತ, ವಿನಯ ನಾಯ್ಕ, ಮಾದೇವ ನಾಯ್ಕ ಭಾಗವಹಿಸಿದ್ದರು. ವಿಷ್ಣು ನಾಯ್ಕ ನಿರೂಪಿಸಿದರು. ಎಂ.ಜಿ.ಹೆಗಡೆ ಸ್ವಾಗತಿಸಿದರು.

ಉತ್ಸವದ ಅಂಗವಾಗಿ ವೈದಿಕ ಕಾರ್ಯಕ್ರಮ, ಮಕ್ಕಳಿಂದ ಹಾಡು, ನೃತ್ಯ ನಡೆದವು. ಕಲಾರಂಗ ಯಕ್ಷಬಳಗ ಜಲವಳ್ಳಿ ಇದರ ಕಲಾವಿದರಿಂದ ನಡೆದ ‘ದಕ್ಷ ಯಜ್ಞ’ ಪ್ರಸಂಗದ ಯಕ್ಷಗಾನ ಪ್ರದರ್ಶನ ಪ್ರೇಕ್ಷಕರಿಗೆ ಮುದ ನೀಡಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-20-1394208116

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.