ಹೊನ್ನಾವರ: ತಾಲ್ಲೂಕಿನ ಹೊಸಪಟ್ಟಣದಲ್ಲಿ ಬಾಲಕಿಯೊಬ್ಬಳು ವಿದ್ಯುತ್ ಸ್ಪರ್ಶದಿಂದ ಗುರುವಾರ ಮೃತಪಟ್ಟಿದ್ದಾಳೆ.

ಹೊಸಪಟ್ಟಣದ ನಿವಾಸಿ ಆಶಿಕಾ ಹರೀಶ ನಾಯ್ಕ (5) ಮೃತ ಬಾಲಕಿ. ಮನೆಯ ಸ್ನಾನಗೃಹದ ನೀರಿನ ಪಂಪ್ಸೆಟ್ಗೆ ಅಳವಡಿಸಿದ್ದ ತಂತಿ ತುಂಡಾಗಿ ಕೆಳಗೆ ಬಿದ್ದಿತ್ತು. ಕೈ ತೊಳೆಯಲೆಂದು ಸ್ನಾನಗೃಹಕ್ಕೆ ಹೋದ ಬಾಲಕಿ ತುಂಡಾಗಿ ಬಿದ್ದಿದ್ದ ತಂತಿಯ ಮೇಲೆ ಕಾಲಿಟ್ಟಾಗ ವಿದ್ಯುತ್ ಪ್ರವಹಿಸಿ ತೀವ್ರ ಅಸ್ವಸ್ಥಳಾದಳು. ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಮೊದಲೇ ಆಕೆ ಮೃತಪಟ್ಟಿದ್ದಳು ಎಂದು ಮಂಕಿ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-20-1916316172

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.