ಕಾರವಾರ: ಸತತ 6ನೇ ಬಾರಿಗೆ ಬ್ಲೂ ಫ್ಲ್ಯಾಗ್ ಮಾನ್ಯತೆ ಪಡೆದ ಹೊನ್ನಾವರ ತಾಲ್ಲೂಕಿನ ಕಾಸರಕೋಡ ಕಡಲತೀರದಲ್ಲಿ ಭಾನುವಾರ ಧ್ವಜಾರೋಹಣವನ್ನು ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕಿ ಮಂಗಳ ಗೌರಿ ಭಟ್ ನೆರವೇರಿಸಿದರು.

‘ದೇಶಧ 14 ಕಡಲತೀರಗಳಿಗೆ ಪ್ರಸಕ್ತ ವರ್ಷ ಬ್ಲೂ ಫ್ಲ್ಯಾಗ್ ಮಾನ್ಯತೆ ಸಿಕ್ಕಿದೆ. ರಾಜ್ಯದಲ್ಲಿ ಮೂರು ಕಡಲತೀರಗಳು ಈ ಪಟ್ಟಿಗೆ ಸೇರಿದ್ದು, ಅವುಗಳಲ್ಲಿ ಕಾಸರಕೋಡ ಕಡಲತೀರವೂ ಒಂದು. ಮುಂದಿನ ದಿನಗಳಲ್ಲಿ ಕಾರವಾರದ ಟ್ಯಾಗೋರ್ ಕಡಲತೀರ ಮತ್ತು ಹೊನ್ನಾವರದ ಅಪ್ಸರಕೊಂಡ ಕಡಲತೀರಕ್ಕೆ ಬ್ಲೂ ಫ್ಲ್ಯಾಗ್ ಮಾನ್ಯತೆ ಪಡೆಯಲು ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ಅವರು ಹೇಳಿದರು.

‘ಕಡಲತೀರದ ಸ್ವಚ್ಛತೆ, ಪ್ರವಾಸಿಗರ ಸುರಕ್ಷತೆ, ಉತ್ತಮ ಮೂಲಸೌಕರ್ಯಗಳ ವ್ಯವಸ್ಥೆ ಹಾಗೂ ನೈಸರ್ಗಿಕ ವಸ್ತುಗಳ ಬಳಕೆಯ ಮೂಲಕ ಅಭಿವೃದ್ಧಿಪಡಿಸಿರುವುದನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ. ಕಡಲತೀರ ಸ್ವಚ್ಛತೆಗೆ ಯಂತ್ರಗಳನ್ನು ಒದಗಿಸಲಾಗಿದೆ. ಪ್ರವಾಸಿಗರ ಸುರಕ್ಷತೆಗೆ ಜೀವರಕ್ಷಕ ಸಿಬ್ಬಂದಿ ನಿಯೋಜಿಸಿದ್ದೇವೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-20-1300615297

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.