ಅಂಕೋಲಾ: ಶಾಲಾ ಶಿಕ್ಷಣ ಇಲಾಖೆ ಉತ್ತರ ಕನ್ನಡ ಜಿಲ್ಲೆಯ ಉಪ ನಿರ್ದೇಶಕಿಯಾಗಿ ಆಯ್ಕೆಯಾದ ಲತಾ ನಾಯಕ ಅವರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದಿಂದ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಲತಾ ನಾಯಕ, 2024- 25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತರ ಕನ್ನಡ ಜಿಲ್ಲೆಯು ರಾಜ್ಯಕ್ಕೆ ಮೂರನೇ ಸ್ಥಾನ ಗಳಿಸಿದ್ದು ಸಂತಸದ ಸಂಗತಿ. ಹಿರಿಯ ಅಧಿಕಾರಿಗಳ ಮಾರ್ಗದರ್ಶನ, ಕಿರಿಯ ಅಧಿಕಾರಿಗಳ, ಸಿಬ್ಬಂದಿ ಸಹಕಾರದಲ್ಲಿ ಈ ಸಾಧನೆ ಸಾಧ್ಯವಾಯಿತು. ಈ ಸಾಧನೆಯಲ್ಲಿ ಶಿಕ್ಷಕರ ಪರಿಶ್ರಮ ಸಾಕಷ್ಟಿದೆ’ ಎಂದರು.

ಅಂಕೋಲಾ ತಾಲ್ಲೂಕು ಕ್ಷೇತ್ರಶಿಕ್ಷಣಾಧಿಕಾರಿ ಮಂಗಳಲಕ್ಷ್ಮೀ ಪಾಟೀಲ ಮಾತನಾಡಿದರು.

ಅಂಕೋಲಾ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಗದೀಶ ನಾಯಕ ಹೊಸ್ಕೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕುಮಟಾ ಡಯಟ್ನ ವಿಶ್ರಾಂತ ಪ್ರಾಚಾರ್ಯ ಎನ್.ಜಿ.ನಾಯಕ, ಸಂಘದ ಪ್ರಧಾನ ಕಾರ್ಯದರ್ಶಿ ರಾಜು ನಾಯಕ, ಮಂಜುನಾಥ ನಾಯಕ, ಭಾರತಿ ನಾಯಕ, ತುಕಾರಾಮ ಬಂಟ, ಸಂಜೀವ ನಾಯಕ, ವೆಂಕಮ್ಮ ನಾಯಕ, ಶೋಭಾ ನಾಯಕ, ದಿವಾಕರ ದೇವನಮನೆ, ಆನಂದು ನಾಯ್ಕ, ವಿನಾಯಕ ನಾಯ್ಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.