ಕಾರವಾರ: ‘ಜಿಲ್ಲೆಯಲ್ಲಿ ನಿಯಮಬಾಹೀರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ಹೇಳಿದರು.

‘ವೀಸಾ ಅವಧಿ ಮುಗಿದರೂ ಇಲ್ಲಿಯೇ ಉಳಿದುಕೊಂಡರೆ ಅದು ಅಕ್ರಮ. ಅಂತಹ ವಿದೇಶಿಗರನ್ನು ಪತ್ತೆ ಹಚ್ಚುವ ಕೆಲಸ ನಡೆಸುತ್ತೇವೆ. ಈಚೆಗೆ ವೀಸಾ ಅವಧಿ ಮುಗಿದರೂ ವಾಸವಿದ್ದ ರಷ್ಯನ್ ಮಹಿಳೆಯೊಬ್ಬರನ್ನು ಗೋಕರ್ಣದಲ್ಲಿ ಪತ್ತೆ ಹಚ್ಚಿ ವಿದೇಶಿಗರ ಬಂಧನ ಕೇಂದ್ರಕ್ಕೆ ಕಳುಹಿಸಲಾಗಿದೆ’ ಎಂದು ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಜಿಲ್ಲೆಯಲ್ಲಿ 13,473 ಟಿಬೇಟಿಯನ್ ಪ್ರಜೆಗಳು ಮುಂಡಗೋಡದ ಟಿಬೇಟಿಯನ್ ನಿರಾಶ್ರಿತ ಕೇಂದ್ರದಲ್ಲಿದ್ದಾರೆ. ಅವರ ಹೊರತಾಗಿ ಅಧ್ಯಯನ, ಪ್ರವಾಸ, ಉದ್ಯೋಗದ ನಿಮಿತ್ತ ವೀಸಾ ಪಡೆದುಕೊಂಡಿರುವ 367 ವಿದೇಶಿಗರು ನೆಲೆಸಿದ್ದಾರೆ. ಅವರೆಲ್ಲರ ಮೇಲೆ ನಿಗಾ ಇರಿಸಲಾಗಿದೆ’ ಎಂದರು.

‘ಇಸ್ಪೀಟ್, ಓಸಿ, ಅಕ್ರಮ ಮರಳು ಗಣಿಗಾರಿಕೆ ಸೇರಿದಂತೆ ಯಾವುದೇ ನಿಯಮಬಾಹಿರ ಚಟುವಟಿಕೆ ನಡೆಸಲು ಆಸ್ಪದ ನೀಡುವುದಿಲ್ಲ. ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕಲಾಗುತ್ತದೆ. ಚೆಕ್ಪೋಸ್ಟ್ಗಳಲ್ಲಿ ತಪಾಸಣೆಗಳನ್ನು ಬಿಗುಗೊಳಿಸುವ ಜತೆಗೆ ತನಿಖಾ ಠಾಣೆಗಳಲ್ಲಿ ಸೂಕ್ತ ಸೌಕರ್ಯಗಳನ್ನು ಒದಗಿಸಲಾಗುವುದು’ ಎಂದರು.

‘ಇದೇ ಮೊದಲ ಬಾರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆ ನಿಭಾಯಿಸುತ್ತಿದ್ದೇನೆ. ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳಲು ಆದ್ಯತೆ ನೀಡಲಾಗುತ್ತದೆ. ಸಾರ್ವಜನಿಕರ ಸಹಕಾರದೊಂದಿಗೆ ಬೀಟ್ ವ್ಯವಸ್ಥೆ ಬಲಪಡಿಸಲಾಗುವುದು. ಪ್ರತಿಯೊಂದೂ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ, ಠಾಣೆ ವ್ಯಾಪ್ತಿಯ ಸ್ಥಿತಿಗತಿ ತಿಳಿದುಕೊಳ್ಳುತ್ತಿದ್ದೇನೆ’ ಎಂದರು.

‘ಡಿಜಿಟಲ್ ಅರೆಸ್ಟ್, ಸೈಬರ್ ವಂಚನೆ ವಿರುದ್ಧ ಪರಿಣಾಮಕಾರಿಯಾಗಿ ಜನಜಾಗೃತಿ ಮೂಡಿಸಲು ಇಲಾಖೆ ಎಲ್ಲ ರೀತಿಯ ಪ್ರಯತ್ನ ನಡೆಸುತ್ತಿದೆ. ಶಾಲೆ, ಕಾಲೇಜುಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಿ ತಿಳಿವಳಿಕೆ ನೀಡಲಾಗುವುದು’ ಎಂದರು

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೃಷ್ಣಮೂರ್ತಿ ಇದ್ದರು.

ತರಬೇತಿ ನಿರತ ಎಸ್ಐಗಳ ಸಂವಾದ

ತರಬೇತಿ ಪಡೆಯುತ್ತಿರುವ 46ನೇ ಬ್ಯಾಚ್ನ ಪೊಲೀಸ್ ಸಬ್ ಇನ್ಸ್ಪೆಕ್ಟರ್ಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ಸಮ್ಮುಖದಲ್ಲಿ ಪತ್ರಕರ್ತರೊಂದಿಗೆ ಸಂವಾದ ನಡೆಸಿದರು. ‘ಇದೇ ಮೊದಲ ಬಾರಿಗೆ ಐಪಿಎಸ್ ಅಧಿಕಾರಿಗಳಿಗೆ ನೀಡುವ ತರಬೇತಿ ಮಾದರಿಯಲ್ಲೇ ಸಬ್ ಇನ್ಸ್ಪೆಕ್ಟರ್ಗಳಿಗೆ ಪೊಲೀಸ್ ತರಬೇತಿ ನೀಡಲಾಗುತ್ತಿದೆ. ಮೈಸೂರಿನ ಪೊಲೀಸ್ ತರಬೇತಿ ಅಕಾಡೆಮಿಯಲ್ಲಿ ತರಬೇತಿ ಹಂತದಲ್ಲಿನ 330 ಎಸ್ಐಗಳ ಪೈಕಿ 14 ಜನರ ತಂಡವನ್ನು ಉತ್ತರ ಕನ್ನಡ ಜಿಲ್ಲೆಗೆ ಕಳುಹಿಸಲಾಗಿದೆ. ಇಲ್ಲಿನ ವಿವಿಧ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಅಲ್ಲಿನ ಕಾರ್ಯವೈಖರಿ ಗಮನಿಸುತ್ತಿದ್ದೇವೆ. ಇದೇ ಮೊದಲ ಬಾರಿಗೆ ಹೊಸ ಮಾದರಿಯ ಕ್ಷೇತ್ರ ಅಧ್ಯಯನದ ಅವಕಾಶ ಸಿಕ್ಕಿದೆ’ ಎಂದು ಪ್ರಶಿಕ್ಷಣಾರ್ಥಿಯೊಬ್ಬರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.