ದಾಂಡೇಲಿ: ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರದಿಂದ ಆಚರಿಸಲು ಎಲ್ಲ ಸಿದ್ಧತೆ ನಡೆಸಲಾಗಿದೆ. ಈ ಕಾರ್ಯಕ್ರಮಕ್ಕೆ ತಾಲ್ಲೂಕಿನ ಎಲ್ಲ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು, ಶಾಲೆ–ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಬೇಕು ಎಂದು ನಗರಸಭೆಯ ಅಧ್ಯಕ್ಷ ಅಶ್ಫಾಕ್ ಶೇಖ ಹೇಳಿದರು.

ಸ್ವಾತಂತ್ರ್ಯೋತ್ಸವ ನಿಮಿತ್ತ ನಗರದ ತಾಲ್ಲೂಕು ಆಡಳಿತ ಸೌಧದಲ್ಲಿ ತಾಲ್ಲೂಕಾಡಳಿತ ಮತ್ತು ನಗರಸಭೆಯಿಂದ ನಡೆದ ಪೂರ್ವಭಾವಿ ಸಭೆಯಲ್ಲಿ ಶುಕ್ರವಾರ ಅವರು ಮಾತನಾಡಿದರು.

ಪೌರಾಯುಕ್ತ ವಿವೇಕ ಬನ್ನೆ ಹಾಗೂ ತಹಶೀಲ್ದಾರ್ ಶೈಲೇಶ ಪರಮಾನಂದ ಮಾತನಾಡಿ, ಆಗಸ್ಟ್ 15ರಂದು ಬೆಳಿಗ್ಗೆ 8ಕ್ಕೆ ನಗರಸಭೆ ಮತ್ತು ತಾಲ್ಲೂಕು ಆಡಳಿತ ಸೌಧದಲ್ಲಿ ಧ್ವಜಾರೋಹಣ ನಡೆಯಲಿದೆ. ಆನಂತರ ಬೆಳಿಗ್ಗೆ 9.30ಕ್ಕೆ ಹಳೆ ನಗರಸಭೆಯ ಮೈದಾನದಲ್ಲಿ ಸಾರ್ವಜನಿಕ ಧ್ವಜಾರೋಹಣ ಮತ್ತು ಕಾರ್ಯಕ್ರಮಗಳು ನಡೆಯಲಿವೆ. ಎಲ್ಲ ಕಾರ್ಯಕ್ರಮಗಳಲ್ಲಿ ಜನಪ್ರತಿನಿಧಿಗಳು, ಎಲ್ಲ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಸಂಘ–ಸಂಸ್ಥೆಗಳ, ಪದಾಧಿಕಾರಿಗಳು, ಸದಸ್ಯರು, ವಿವಿದ ಪಕ್ಷಗಳ ಮುಖಂಡರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕ ವೃಂದ, ಉಪನ್ಯಾಸಕರು, ನಿವೃತ್ತ ಸೈನಿಕರು ಮುಂತದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

ಸಭೆಯಲ್ಲಿ ನಗರಸಭೆ ಉಪಾಧ್ಯಕ್ಷೆ ಶೀಲ್ಪಾ, ಸದಸ್ಯರಾದ ಮೋಹನ ಹಲವಾಯಿ, ಸಂಜಯ ನಂದ್ಯಾಳಕರ, ರುಕ್ಮಿಣಿ ಬಾಗಡೆ, ಅನಿಲ ನಾಯ್ಕರ ಮಹಾದೇವ ಜಮಾದಾರ, ಪ್ರೀತಿ ನಾಯರ, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಟಿ.ಸಿ. ಹಾದಿಮನಿ, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದ ಮಹಾಲೆ, ಪಿಎಸ್ಐ ಅಮೀನ ಅತ್ತಾರ, ವಲಯ ಅರಣ್ಯಾಧಿಕಾರಿ ನದಾಫ, ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್.ವಾಸರೆ, ಸಾರಿಗೆ ಘಟಕದ ವ್ಯವಸ್ಥಾಪಕ ಎಲ್.ಎಚ್. ರಾಠೋಡ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನಾಗರೇಖಾ ಗಾಂವಕರ, ಬಂಗೂರನಗರ ಕಾಲೇಜಿನ ಪ್ರಾಂಶುಪಾಲೆ ಆಶಾಲತಾ ಜೈನ್ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ನಾಗರೇಖಾ ಗಾಂವಕರ, ಸಿ.ಆರ್.ಪಿ ಲಲಿತಾ, ನಗರಸಭೆಯ ಅಧಿಕಾರಿಗಳಾದ ಮೈಕಲ್ ಫರ್ನಾಂಡಿಸ್, ಬಾಳು ಗವಾಸ, ಶಾಲಾ ಕಾಲೇಜು ಶಿಕ್ಷಕರು, ಇಲಾಖೆಗಳ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.