ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾತೊಡ್ಡಿ | ಜೇನುಹುಳುಗಳ ದಾಳಿಯಿಂದ ಗಾಯ: 17ರವರೆಗೆ ಪ್ರವಾಸಿಗರಿಗೆ ನಿರ್ಬಂಧ

Published 14 ಏಪ್ರಿಲ್ 2024, 13:41 IST
Last Updated 14 ಏಪ್ರಿಲ್ 2024, 13:41 IST
ಅಕ್ಷರ ಗಾತ್ರ

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ): ಜೇನು ಹುಳಗಳು ದಾಳಿಮಾಡಿದ ಹಿನ್ನೆಲೆಯಲ್ಲಿ ಏಪ್ರಿಲ್ 17ರವರೆಗೆ ಸಾತೊಡ್ಡಿ ಜಲಪಾತಕ್ಕೆ ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ ಎಂದು ಅರಣ್ಯ ಇಲಾಖೆ ಹಾಗೂ ಗ್ರಾಮ ಅರಣ್ಯ ಸಮಿತಿ ತಿಳಿಸಿದೆ.

‘ಅಪರಿಚಿತರು ಈಚೆಗೆ ಕಲ್ಲು ಹೊಡೆದ ಪರಿಣಾಮ ಪ್ರವಾಸಿಗರ ಮೇಲೆ ಜೇನು ಹುಳಗಳು ದಾಳಿ ಮಾಡಿದ್ದವು. ಶನಿವಾರವೂ ಕೆಲ ಪ್ರವಾಸಿಗರಿಗೆ ಜೇನುಹುಳಗಳು ಕಡಿದಿವೆ. ತೀವ್ರ ಸ್ವರೂಪದಲ್ಲಿ ಗಾಯಗೊಂಡಿರುವ ಹಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಹೀಗಾಗಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ’ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT