ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಸಿಯಲ್ಲಿ ಐ.ಟಿ ದಾಳಿ; ದಾಖಲೆ ಪರಿಶೀಲನೆ

ಅಡಿಕೆ, ರಿಯಲ್ ಎಸ್ಟೇಟ್ ಉದ್ಯಮ ಸೇರಿ ಹಲವು ಕಾರ್ಯಚಟುವಟಿಕೆ
Published 3 ಮೇ 2024, 23:45 IST
Last Updated 3 ಮೇ 2024, 23:45 IST
ಅಕ್ಷರ ಗಾತ್ರ

ಶಿರಸಿ: ಅಡಿಕೆ, ರಿಯಲ್ ಎಸ್ಟೇಟ್ ಉದ್ಯಮ ಸೇರಿ ಹಲವು ಕಾರ್ಯಚಟುವಟಿಕೆ ನಡೆಸುತ್ತಿದ್ದ ನಗರದ ಕೆಲ ಉದ್ಯಮಿಗಳ ಮನೆ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿ, ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಕೆಪಿಸಿಸಿ ಸದಸ್ಯ, ಕಾಂಗ್ರೆಸ್ ಉತ್ತರ ಕನ್ನಡ ಜಿಲ್ಲಾ ಘಟಕದ ಮಾಧ್ಯಮ ವಕ್ತಾರ ದೀಪಕ್ ದೊಡ್ಡೂರು, ತೋಟಗಾರ್ಸ್ ಸೇಲ್ ಸೊಸೈಟಿ (ಟಿಎಸ್​ಎಸ್) ಸಂಸ್ಥೆಯ ಮಾಜಿ ವ್ಯವಸ್ಥಾಪಕ ಹಾಗೂ ಉದ್ಯಮಿ ರವೀಶ ಹೆಗಡೆ, ಸಂಸ್ಥೆಯ ನಿರ್ದೇಶಕ ರಾಮಕೃಷ್ಣ ಹೆಗಡೆ ಕಡವೆ, ಪ್ರವೀಣ ಹೆಗಡೆ ಹೀಪನಳ್ಳಿಯವರ ಮನೆ ಮತ್ತು ಅಡಿಕೆ ವ್ಯಾಪಾರಿ ಶಿವರಾಮ ಹೆಗಡೆ ಅವರ ಅಡಿಕೆ ಮಂಡಿ ಮೇಲೆ ದಾಳಿ ನಡೆದಿದೆ. ಅಧಿಕಾರಿಗಳು ಮಾಹಿತಿ ಸಂಗ್ರಹಿಸುವುದರ ಜೊತೆಗೆ ದಾಖಲೆಗಳನ್ನು ವಶಪಡಿಸಿಕೊಂಡರು.

‘ಟಿಎಸ್ಎಸ್‍ನಲ್ಲಿರುವ ಸೇಫ್ ಲಾಕರ್ ತೆರೆಸಿ, ಪ್ರವೀಣ ಹೆಗಡೆ ಅವರಿಗೆ ಸಂಬಂಧಪಟ್ಟ ಹೆಚ್ಚಿನ ಸ್ವತ್ತು, ದಾಖಲೆ ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 

ಬೆಳಿಗ್ಗೆ 7ರಿಂದ ಆರಂಭಿಸಿದ ಐಟಿ ಅಧಿಕಾರಿಗಳ ಕಾರ್ಯಾಚರಣೆ ರಾತ್ರಿಯವರೆಗೆ ಮುಂದುವರೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT