ಶುಕ್ರವಾರ, ಜನವರಿ 27, 2023
20 °C
ಸ್ವರ್ಣವಲ್ಲಿಶ್ರೀ ಅಧ್ಯಕ್ಷತೆಯ ಜಾಗೃತ ವೇದಿಕೆ ಸಭೆಯಲ್ಲಿ ಹಕ್ಕೊತ್ತಾಯ

‘ಸೋಂದಾ ಕೋಟೆ ಲೀಸ್‍ಗೆ ಕೊಡಬೇಡಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಸಿ: ತಾಲ್ಲೂಕಿನ ಸೋಂದಾದಲ್ಲಿರುವ ಐತಿಹಾಸಿಕ ಕೋಟೆ ಪ್ರದೇಶವನ್ನು ಲೀಸ್ ಆಧಾರದಲ್ಲಿ ಅರಣ್ಯೇತರ ಉದ್ದೇಶಕ್ಕೆ ನೀಡಬಾರದು. ಈ ತಾಣದ ನಿರ್ವಹಣೆ ಜವಾಬ್ದಾರಿಯನ್ನು ಸೋಂದಾ ಜಾಗೃತ ವೇದಿಕೆಗೆ ವಹಿಸಿಕೊಡಬೇಕು ಎಂಬ ಆಗ್ರಹ ವ್ಯಕ್ತವಾಗಿದೆ.

ಈಚೆಗೆ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ಜರುಗಿದ ಜಾಗೃತ ವೇದಿಕೆಯ ಸಭೆಯಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು.

‘ಸಹ್ಯಾದ್ರಿ ಪಾರಂಪರಿಕ ಪ್ರಾಧಿಕಾರ ವ್ಯಾಪ್ತಿಯಲ್ಲಿರುವ ಸೋಂದಾ ಕೋಟೆಯನ್ನು ಜೀವವೈವಿಧ್ಯ ಪಾರಂಪರಿಕ ತಾಣ ಎಂದು ಘೋಷಣೆ ಮಾಡಬೇಕು. ಈ ಕುರಿತು ಜೀವ ವೈವಿಧ್ಯ ಮಂಡಳಿಗೆ ಸಲ್ಲಿಕೆಯಾದ ಪ್ರಸ್ತಾವಕ್ಕೆ ಅನುಮತಿಸಬೇಕು’ ಎಂದು ಹಕ್ಕೊತ್ತಾಯ ಮಂಡಿಸಲಾಯಿತು.

‘ಇಡೀ ಸೋಂದಾ ಪ್ರದೇಶ ಹಲವು ಐತಿಹಾಸಿಕ ಸ್ಮಾರಕಗಳನ್ನು ಹೊಂದಿದೆ. ಸೋಂದಾ ಕೋಟೆ ಪ್ರದೇಶದಲ್ಲಿ ಇನ್ನಷ್ಟು ಉತ್ಖನನ, ಐತಿಹಾಸಿಕ ಅಭ್ಯಾಸ ಕೈಗೊಳ್ಳಬೇಕು. ಕೋಟೆ ಜಾಗದಲ್ಲಿ ಪರಿಸರ ಪ್ರವಾಸೋದ್ಯಮ ಯೋಜನೆ ಜಾರಿ ಮಾಡಬೇಕು. ಸೋಂದಾ ಕೋಟೆ ಪ್ರದೇಶವನ್ನು ಅರಣ್ಯೇತರ ಉದ್ದೇಶಕ್ಕೆ ನೀಡಬಾರದು. ಈ ಎಲ್ಲ ಅಂಶಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ, ಕೇಂದ್ರ ಸರ್ಕಾರದ ಪುರಾತತ್ವ ಇಲಾಖೆಗೆ ಸಲ್ಲಿಸಬೇಕು’ ಎಂಬ ನಿರ್ಣಯ ಕೈಗೊಳ್ಳಲಾಯಿತು.

ಸಭೆಯಲ್ಲಿ ವೃಕ್ಷಲಕ್ಷ ಆಂದೋಲನ ಸಮಿತಿ ಸಂಚಾಲಕ ಅನಂತ ಹೆಗಡೆ ಅಶೀಸರ, ಸ್ವರ್ಣವಲ್ಲಿ ಮಠದ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ಮನಳ್ಳಿ, ಕಾರ್ಯದರ್ಶಿ ಎಂ.ಆರ್.ಹೆಗಡೆ, ಜಾಗೃತ ವೇದಿಕೆಯ ಕಾರ್ಯಾಧ್ಯಕ್ಷ ರತ್ನಾಕರ ಹೆಗಡೆ ಬಾಡಲಕೊಪ್ಪ, ಆರ್.ಎನ್. ಹೆಗಡೆ ಉಳ್ಳಿಕೊಪ್ಪ, ಮಠದ ವ್ಯವಸ್ಥಾಪಕ ಆರ್.ಎಸ್.ಹೆಗಡೆ ಭಯರುಂಬೆ, ಇತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು