ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಜಾತ್ರಾ ವಿಶೇಷ ಅನುದಾನ ₹ 3.50 ಕೋಟಿ ಮಂಜೂರು

Published 17 ಮೇ 2024, 14:47 IST
Last Updated 17 ಮೇ 2024, 14:47 IST
ಅಕ್ಷರ ಗಾತ್ರ

ಶಿರಸಿ: ಮಾರಿಕಾಂಬಾ ಜಾತ್ರಾ ವಿಶೇಷ ಅನುದಾನ ₹ 3.50 ಕೋಟಿಯನ್ನು ನಗರಸಭೆಗೆ ಮಂಜೂರು ಮಾಡಿಸುವಲ್ಲಿ ಶಾಸಕ ಭೀಮಣ್ಣ ನಾಯ್ಕ ವಿಶೇಷ ಪಯತ್ನ ಸಫಲವಾಗಿದೆ ಎಂದು ನಗರಸಭೆ ಸದಸ್ಯ ಪ್ರದೀಪ ಶೆಟ್ಟಿ ಹೇಳಿದರು.

ಅವರು ಶುಕ್ರವಾರ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಜಾತ್ರೆಯ ಸಂದರ್ಭದಲ್ಲಿ ಶಿರಸಿ ನಗರಸಭೆಯ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ₹ 5 ಕೋಟಿ ವಿಶೇಷ ಅನುದಾನ ಬಿಡುಗಡೆಗೊಳಿಸುವಂತೆ ಸಿಎಂ ಸಿದ್ಧರಾಮಯ್ಯ ಹಾಗೂ ನಗರಾಭಿವೃದ್ಧಿ ಸಚಿವ ಬಳಿ ತೆರಳಿ ವಿನಂತಿಸಿದ್ದರು. ಅವರು ಸಹ ಸಕಾರಾತ್ಮಕ ಸ್ಪಂದಿಸಿ, ₹ 3.50 ಕೋಟಿ ಮಂಜೂರು ನೀಡಿದ್ದಾರೆ. ಆದರೆ, ಸಾಮಾಜಿಕ ಕಾರ್ಯಕರ್ತ ಹಿತೇಂದ್ರ ನಾಯ್ಕ ಮತ್ತು ಕೆಲ ಸಾಮಾಜಿಕ ಜಾಲತಾಣದಲ್ಲಿ ಜಾತ್ರೆಗೆ ಅನುದಾನ ತರಲು ಶಾಸಕರು ಅನುದಾನ ತರಲು ವಿಫಲರಾಗಿದ್ದಾರೆ ಎಂಬ ವಿಷಯ ಹರಿದಾಡಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರಥಮ ಜಾತ್ರೆಗೆ ಶಾಸಕ ಭೀಮಣ್ಣ ನಾಯ್ಕ ಅನುದಾನ ಬಿಡುಗಡೆ ಮಾಡುವಂತೆ ಆರ್.ವಿ. ದೇಶಪಾಂಡೆ ಮೂಲಕ ಮುಖ್ಯಮಂತ್ರಿ ಭೇಟಿಯಾಗಿ ಮನವಿ ಸಲ್ಲಿಸಲಾಗಿತ್ತು. ಶಾಸಕರ ಬೇಡಿಕೆಯನ್ನು ಸ್ಪಂದಿಸಿದ ಅವರು, ಜಾತ್ರೆಯ ಸಂದರ್ಭವನ್ನು ಉಪಯೋಗಿಸಿಕೊಂಡು ವಿಶೇಷ ಅನುದಾನ ಬಿಡುಗಡೆ ಮಾಡುವ ಪ್ರಯತ್ನ ಮಾಡಿದ್ದಾರೆ. ಸರ್ಕಾರದ ಆದೇಶವಾದ ನಂತರ ಹಲವು ನಿಯಮ ಹಾಗೂ ಪ್ರಕ್ರಿಯೆಗಳಿರುತ್ತದೆ. ಹಿತೇಂದ್ರ ನಾಯ್ಕ ಹಾಗೂ ಸುಳ್ಳು ಸುದ್ದಿ ಹರಿಬಿಡುವವರು ಮೊದಲು ಅರ್ಥಮಾಡಿಕೊಳ್ಳಬೇಕು. ಶಾಸಕರು ಅನುದಾನ ತರುವಲ್ಲಿ ವಿಫಲರಾಗಿದ್ದಾರೆ ಎಂಬ ಆರೋಪ ಸುಳ್ಳು’ ಎಂದು ಸ್ಪಷ್ಟನೆ ನೀಡಿದರು.

ಹಿಂದಿನ ಶಾಸಕರಾಗಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಕೂಡ ಅನುದಾನ ತಂದಿದ್ದರು. ಸರ್ಕಾರದ ಆದೇಶದ ನಂತರ ಹಲವಾರು ಹಂತದ ಅನುಮತಿ ಪಡೆದ ನಂತರ ಹಣ ಬಿಡುಗಡೆಯಾಗುತ್ತದೆ ಎಂಬುದನ್ನು ತಿಳಿದುಕೊಳ್ಳಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ನಗರಸಭೆ ಸದಸ್ಯರಾದ ಖಾದರ್ ಆನವಟ್ಟಿ, ಫ್ರಾನ್ಸಿಸ್ ನರೋನ್ನಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT