ಜೊಯಿಡಾ: ಹಳಿಯಾಳ– ಜೊಯಿಡಾ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾದ ಮೂರು ದಿನಗಳ ಸ್ವಚ್ಛತಾ ಆಂದೋಲನಕ್ಕೆ ಜೊಯಿಡಾದಲ್ಲಿ ಶಾಸಕ ಆರ್.ವಿ. ದೇಶಪಾಂಡೆ ಮಂಗಳವಾರ ಚಾಲನೆ ನೀಡಿದರು.

ತಾಲ್ಲೂಕಿನ ಎಲ್ಲ 16 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೆಳಿಗ್ಗೆ 6 ಗಂಟೆಗೆ ನಿಕಟಪೂರ್ವ ಜನಪ್ರತಿನಿಧಿಗಳು ಹಾಗೂ ಎಲ್ಲ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸ್ವಚ್ಛತಾ ಕಾರ್ಯ ನಡೆಸಿದರು.

ಜೊಯಿಡಾ ಪೆಟ್ರೋಲ್ ಬಂಕ್ನಿಂದ ಶಿವಾಜಿ ವೃತ್ತ, ಕುಂಬಾರವಾಡ, ಬೈಲಪಾರ, ಬಸ್ ನಿಲ್ದಾಣದವರೆಗೆ ಸ್ವಚ್ಛತಾ ಕಾರ್ಯ ನಡೆಸಲಾಯಿತು. ತಹಶೀಲ್ದಾರ್ ಮಂಜುನಾಥ ಮುನ್ನೊಳ್ಳಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭಾರತಿ ಎನ್., ಪಿಡಿಒ ಮೋಹನ ಡೊಂಬರ, ವಲಯ ಅರಣ್ಯಾಧಿಕಾರಿ ಪ್ರವಿಣ ಚಲವಾದಿ, ಪ್ರಮುಖರಾದ ಸದಾನಂದ ದಬ್ಗಾರ, ವಿನಯ ದೇಸಾಯಿ, ಸಂತೋಷ ಮಂತೆರೊ ಭಾಗವಹಿಸಿದ್ದರು.

ಉಳವಿಯಲ್ಲಿ ಗ್ರಾಮ ಪಂಚಾಯಿತಿ ನಿಕಟಪೂರ್ವ ಅಧ್ಯಕ್ಷ ಮಂಜುನಾಥ ಮೊಕಾಶಿ, ನಂದಿಗದ್ದೆಯಲ್ಲಿ ಅರುಣ ದೇಸಾಯಿ, ಆವೇಡಾದಲ್ಲಿ ಅರುಣ್ ಭಗವತಿರಾಜ್, ಕುಂಬಾರವಾಡದಲ್ಲಿ ದತ್ತಾ ನಾಯ್ಕ ಮತ್ತು ಪುರುಷೋತ್ತಮ ಕಾಮತ ಮುಂದಾಳತ್ವದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

‘ಸ್ವಚ್ಛತೆ ಪ್ರತಿಯೊಬ್ಬರ ಜವಾಬ್ದಾರಿ’

ದಾಂಡೇಲಿ ವರದಿ: ಶಾಸಕ ಆರ್.ವಿ. ದೇಶಪಾಂಡೆ ಮತ್ತು ಅವರ ಪತ್ನಿ ರಾಧಾ ದೇಶಪಾಂಡೆ ಅವರು ಸ್ವಚ್ಛತಾ ಅಭಿಯಾನಕ್ಕೆ ಕೆ.ಸಿ. ವೃತ್ತದಲ್ಲಿ ಮಂಗಳವಾರ ಸಾಂಕೇತಿಕವಾಗಿ ಚಾಲನೆ ನೀಡಿದರು.

ಶಾಸಕರು ಮಾತನಾಡಿ, ‘ಸ್ವಚ್ಛತೆ ಪ್ರತಿಯೊಬ್ಬರ ಜವಾಬ್ದಾರಿ. ನಮ್ಮ ಅಕ್ಕಪಕ್ಕದ ಪ್ರದೇಶಗಳನ್ನು ಸ್ವಚ್ಛ ಮತ್ತು ಸುಂದರವಾಗಿಡುವುದು ಈ ಅಭಿಯಾನದ ಉದ್ದೇಶ’ ಎಂದು ಹೇಳಿದರು.

ಅಭಿಯಾನದಲ್ಲಿ ತಹಶೀಲ್ದಾರ್ ಶೈಲೇಶ್ ಪರಮಾನಂದ, ನಗರಸಭೆ ಪೌರಾಯುಕ್ತ ವಿವೇಕ್ ಬನ್ನೆ, ಅಧಿಕಾರಿಗಳು, ಸಿಬ್ಬಂದಿ, ಪಕ್ಷಗಳ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.