ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜೊಯಿಡಾ: ಪೌಷ್ಟಿಕ ಆಹಾರದ ಕಿಟ್ ವಿತರಣೆ

Published 9 ಜುಲೈ 2024, 12:21 IST
Last Updated 9 ಜುಲೈ 2024, 12:21 IST
ಅಕ್ಷರ ಗಾತ್ರ

ಜೊಯಿಡಾ: ಮಕ್ಕಳು ಅಪೌಷ್ಟಿಕತೆಯಿಂದ ಬಳಲುವುದನ್ನು ತಪ್ಪಿಸಲು ಅವರಿಗೆ ಪೌಷ್ಟಿಕ ಆಹಾರ ನೀಡಿ ಸದೃಢ ಪ್ರಜೆಗಳನ್ನಾಗಿ ರೂಪಿಸಬೇಕೆಂದು ಉತ್ತರ ಕನ್ನಡ ಜಿಲ್ಲಾ ಪಂಚಾಯ್ತಿ ಮುಖ್ಯ ಯೋಜನಾಧಿಕಾರಿ ವಿನೋದ್ ಅಣ್ವೇಕರ ಹೇಳಿದರು.

ತಾಲ್ಲೂಕು ಆಸ್ಪತ್ರೆಯಲ್ಲಿ ಸ್ವಾಮಿ ವಿವೇಕಾನಂದ ಯುತ್ ಮೊಮೆಂಟ್ ಹಾಗೂ ಎಲ್‌ಟಿಇ ಮೈಂಡ್ ಟ್ರೀ ಫೌಂಡೇಷನ್ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಇತ್ತೀಚೆಗೆ ನಡೆದ ಸಮಗ್ರ ಗ್ರಾಮೀಣ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಪೌಷ್ಟಿಕ ಮಕ್ಕಳಿಗೆ ಪೌಷ್ಟಿಕ ಆಹಾರ ಧಾನ್ಯದ ಕಿಟ್‌ ವಿತರಣೆ ಹಾಗೂ ತಪಾಸಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಭಿವೃದ್ಧಿ ಸರ್ಕಾರದಿಂದ ಮಾತ್ರವಲ್ಲ, ಸರ್ಕಾರ ಸಂಘ-ಸಂಸ್ಥೆಗಳು ಹಾಗೂ ಸಮಾಜ ಸೇರಿದಾಗ ಮಾತ್ರ ವೇಗವಾಗಿ ಆಗಲು ಸಾಧ್ಯ ಎಂದು ಹೇಳಿದರು.

ಸ್ವಾಮಿ ವಿವೇಕಾನಂದ ಯುತ್ ಮೊಮೆಂಟ್‌ನ ಪ್ರತಿನಿಧಿಯಾಗಿ ಮೈಸೂರಿನಿಂದ ಬಂದಿದ್ದ ಡಾ. ಮೋಹನ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಜೊಯಿಡಾ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಣಾಧಿಕಾರಿ ಆನಂದ್ ಬಡಕುಂದ್ರಿ ಮಾತನಾಡಿದರು.

ಹಳಿಯಾಳದ ಮಕ್ಕಳ ತಜ್ಞ ಮಾದಣ್ಣವರ ಮಕ್ಕಳ ಆರೋಗ್ಯ ತಪಾಸಣೆ ಮಾಡಿ ಅವರಿಗೆ ಔಷಧಿ ನೀಡಿದರು.

ದೆಹಲಿಯಿಂದ ಬಂದಿದ್ದ ನೀತಿ ಆಯೋಗದ ಪ್ರತಿನಿಧಿ ರಿಷಬ್ ಜೈನ್, ತಾ.ಪಂ ನಿರ್ದೇಶಕ ನಜೀರ್ ಸಾಬ್ ಅಕ್ಕಿ, ತಾಲ್ಲೂಕು ವೈದ್ಯಾಧಿಕಾರಿ ಬಾ. ಸುಜಾತ ಒಕ್ಕಲಿ, ಆಡಳಿತ ಅಧಿಕಾರಿ ವಿಜಯ ಕೊಚ್ಚರಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಕಲ್ಪನಾ, ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT