ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾರವಾರ: ಗ್ರಾಮ ಪಂಚಾಯಿತಿ ಅಧ್ಯಕ್ಷ ಹುದ್ದೆ ತೊರೆದು ಶಿಕ್ಷಕಿಯಾದ ಯುವತಿ

Published : 20 ಆಗಸ್ಟ್ 2024, 1:30 IST
Last Updated : 20 ಆಗಸ್ಟ್ 2024, 1:30 IST
ಫಾಲೋ ಮಾಡಿ
Comments

ಕಾರವಾರ: ತಾಲ್ಲೂಕಿನ ಕಡವಾಡ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ಪ್ರಿಯಾ ಗೌಡ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಶಿವಮೊಗ್ಗದ ಖಾಸಗಿ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ನಿಯೋಜನೆಗೊಂಡಿದ್ದಾರೆ.

2021ರಲ್ಲಿ ಗ್ರಾಮ ಪಂಚಾಯಿತಿ ಸದಸ್ಯೆಯಾಗಿ ಅವರು ಮೊದಲ ಅವಕಾಶದಲ್ಲೇ ಅಧ್ಯಕ್ಷೆಯಾಗಿದ್ದರು. 20 ತಿಂಗಳ ಬಳಿಕ ಎರಡನೇ ಅವಧಿಗೂ ಅಧ್ಯಕ್ಷರಾಗಿ ಮುಂದುವರೆದಿದ್ದರು. ಆಗಸ್ಟ್ 1 ರಂದು ಕಾರವಾರ ಉಪವಿಭಾಗಾಧಿಕಾರಿಗೆ ರಿಜಿಸ್ಟರ್ಡ್ ಅಂಚೆ ಮೂಲಕ ರಾಜೀನಾಮೆ ಸಲ್ಲಿಸಿದರು.

‘ಜನಪ್ರತಿನಿಧಿಯಾಗುವ ಮುನ್ನ ಶಿಕ್ಷಕಿಯಾಗಿದ್ದೆ. ರಾಜಕೀಯ ಕ್ಷೇತ್ರದಲ್ಲಿ ಮುಂದುವರಿಯುವ ಬದಲು ಮಕ್ಕಳಿಗೆ ಶಿಕ್ಷಣ ನೀಡುವುದು ಉತ್ತಮ ಸಮಾಜ ಸೇವೆ ಎಂಬುದನ್ನು ಅರಿತುಕೊಂಡೆ. ಅದಕ್ಕೆ ರಾಜೀನಾಮೆ ಸಲ್ಲಿಸಿ ಮತ್ತೆ ಶಿಕ್ಷಕಿ ಆಗಿದ್ದೇನೆ’ ಎಂದು ಪ್ರಿಯಾ ಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT