ಸಿದ್ದಾಪುರ: ಶಿಕ್ಷಣ, ವೃತ್ತಿ ಜೀವನದಲ್ಲಿ ಕನ್ನಡಕ್ಕೆ ಆದ್ಯತೆ ನೀಡುತ್ತಾ ಇಂದಿಗೂ ನ್ಯಾಯಲಯದಲ್ಲಿ ಕನ್ನಡದಲ್ಲೇ ಆದೇಶ ನೀಡುತ್ತಿದ್ದೇನೆ ಎಂದು ಮಡಿಕೇರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ನ್ಯಾಯಾಧೀಶೆ ಸಿ.ರೇಣುಕಾಂಬ ಹೇಳಿದರು.

ತಾಲ್ಲೂಕಿನ ಭುವನಾಗಿರಿಯ ಭುವನೇಶ್ವರಿ ದೇವಾಲಯದಲ್ಲಿ ಕದಂಬ ಸೈನ್ಯದ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಶನಿವಾರ ಅವರು ಮಾತನಾಡಿದರು.

ನಮ್ಮ ಕನ್ನಡಕ್ಕೆ ಪುರಾತನ ಇತಿಹಾಸವಿದೆ. ಆದರೆ ಇಂದು ಯುವ ಪೀಳಿಗೆಗೆ ಕನ್ನಡಾಭಿಮಾನ ಕಡಿಮೆಯಾಗುತ್ತಿದೆ. ನಾವು ಹೆಚ್ಚು ಕನ್ನಡವನ್ನು ಬಳಸಿದಾಗ ಮಾತ್ರ ಮುಂದಿನ ಪೀಳಿಗೆಗೆ ಸ್ವಚ್ಚ ಕನ್ನಡ ನೀಡಲು ಸಾಧ್ಯ ಎಂದರು.

ಕದಂಬ ಸೈನ್ಯದ ರಾಜ್ಯ ಘಟಕದ ಅಧ್ಯಕ್ಷ ಬೇಕ್ರಿ ರಮೇಶ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅತಿಥಿಗಳಾಗಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾಧರ ಕೊಳಗಿ, ಪತ್ರಕರ್ತ ನಾಗರಾಜ ಭಟ್ಟ ಕೆಕ್ಕಾರ್, ನರಗುಂದದ ವಕೀಲ ರಮೇಶ ನಾಯ್ಕರ್, ಬಾದಾಮಿ ರೈತ ಸೇನಾ ತಾಲ್ಲೂಕು ಅಧ್ಯಕ್ಷ ಅಶೋಕ ಸಾತನ್ನವರ, ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಶ್ರೀಕಾಂತ ಹೆಗಡೆ ಗುಂಜಗೋಡು ಸಭೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ರಾಜ್ಯದ ಹಲವು ಸಾಧಕರಿಗೆ ಕಾಕುತ್ಸವರ್ಮ ಪ್ರಶಸ್ತಿ, ವೀರರಾಣಿ ಚೆನ್ನಭೈರವಾದೇವಿ ಪ್ರಶಸ್ತಿ ಮತ್ತು ಕದಂಬ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಉದಯ ಕುಮಾರ ಕಾನಳ್ಳಿ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ನಿಂಗಪ್ಪ ಅರೇರ ಸವಣೂರು ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.