ದಾಂಡೇಲಿ: ಬೆಳ್ಳಿ ಮಹೋತ್ಸವದ ಸಂಭ್ರಮದಲ್ಲಿರುವ ಉತ್ತರ ಕನ್ನಡ ಜಿಲ್ಲಾ 25ನೇ ಕನ್ನಡ ಸಾಹಿತ್ಯ ಸಮ್ಮೇಳನ ನನ್ನ ಕ್ಷೇತ್ರದ ದಾಂಡೇಲಿಯಲ್ಲಿ ನಡೆಯುತ್ತಿರುವುದು ಅಭಿಮಾನದ ಸಂಗತಿ. ಈ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಸಂಘಟಿಸುವ ಜೊತೆಗೆ ಒಂದು ಐತಿಹಾಸಿಕ ಕಾರ್ಯಕ್ರಮವನ್ನಾಗಿ ರೂಪಿಸುವಲ್ಲಿ ಪ್ರತಿಯೊಬ್ಬರ ಸಹಕಾರದ ಅಗತ್ಯವಿದೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ, ಆರ್.ವಿ.ದೇಶಪಾಂಡೆ ಹೇಳಿದರು.

ದಾಂಡೇಲಿ ತಾಲ್ಲೂಕು ಆಡಳಿತಸೌಧದಲ್ಲಿ ಹಮ್ಮಿಕೊಂಡಿದ್ದ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ಧತಾ ಸಭೆ ಹಾಗೂ ಸ್ವಾಗತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅತ್ಯಂತ ಕ್ರಿಯಾಶೀಲವಾಗಿ, ರಚನಾತ್ಮಕ ಕಾರ್ಯಕ್ರಮಗಳು ನಡೆಯುವುದನ್ನು ಗಮನಿಸಿದ್ದೇವೆ. ಇದೀಗ ರಾಜ್ಯದಲ್ಲಿ ಅತಿ ಹೆಚ್ಚು ಸಮ್ಮೇಳನ ನಡೆಸಿರುವ ಖ್ಯಾತಿ ಈ ಜಿಲ್ಲೆಗಿದೆ. ನಾನು ಎಲ್ಲ ರೀತಿಯ ಸಹಕಾರವನ್ನು ನೀಡುವ ಜೊತೆಗೆ, ಇದು ಈ ಜಿಲ್ಲೆಯ ಇತಿಹಾಸ ಪುಟಗಳಲ್ಲಿ ಮರೆಯದ ಸಮ್ಮೇಳನವಾಗಿ ರೂಪಗೊಳ್ಳುವಂತಾಗಬೇಕು. ಎಲ್ಲಇಲಾಖೆಗಳು ಹಾಗೂ ಸಂಘಟನೆಯವರು ಸಹಕರಿಸಬೇಕು ಎಂದರು.

ಡಿ.13, 14, 15, ರಂದು ಉತ್ತರಕನ್ನಡ ಜಿಲ್ಲಾ 25ನೇ ಸಾಹಿತ್ಯ ಸಮ್ಮೇಳನ ದಾಂಡೇಲಿಯಲ್ಲಿ ನಡೆಯಲಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿ ಗೌರವಾಧ್ಯಕ್ಷ ಶಾಸಕ ಆರ್.ವಿ.ದೇಶಪಾಂಡೆ ಘೋಷಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್.ವಾಸರೆ ಮಾತನಾಡಿ, ದಾಂಡೇಲಿ ಇದು ನನ್ನ ಕರ್ಮಭೂಮಿ. ದಾಂಡೇಲಿಯಲ್ಲಿ 14 ವರ್ಷಗಳ ನಂತರ ಜಿಲ್ಲಾ ಸಮ್ಮೇಳನ ನಡೆಯುತ್ತಿದೆ. ಈ ಸಮ್ಮೇಳನವನ್ನು ಅದ್ದೂರಿಯಾಗಿ ಎನ್ನುವುದಕ್ಕಿಂತ ಅರ್ಥಪೂರ್ಣವಾಗಿ ಸಂಘಟಿಸಬೇಕಿದೆ. ಹಲವು ವೈಶಿಷ್ಟ್ಯತೆಗಳನ್ನು ಸಮ್ಮೇಳನ ಹೊಂದಿದ್ದು, ಮೂರು ದಿನಗಳ ಕಾಲ ನಡೆಯಲಿದೆ. 25 ವಿಶೇಷ ಸಾಧಕರಿಗೆ ಸನ್ಮಾನ, 25 ಪುಸ್ತಕಗಳ ಬಿಡುಗಡೆ ಸೇರಿದಂತೆ ಹಲವು ವೈಶಿಷ್ಠ್ಯತೆಗಳಿಂದ ಕೂಡಿರಲಿದೆ. ಅನೇಕ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಸಭೆಯಲ್ಲಿ ತಹಶೀಲ್ದಾರ ಶೈಲೇಶ ಪರಮಾನಂದ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಟಿ.ಸಿ ಹಾದಿಮನಿ, ಪೌರಾಯುಕ್ತ ವಿವೇಕ ಬನ್ನೆ, ನಗರಸಭೆ ಅಧ್ಯಕ್ಷ ಅಶ್ಫಾಕ್ ಶೇಖ್, ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ ಹಲವಾಯಿ, ಬಿಜೆಪಿ ಮಂಡಲ ಅಧ್ಯಕ್ಷ ಬುದ್ದಿವಂತಗೌಡ ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದ ಮಹಾಲೆ, ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ ನಾಯಕ ಬಾವಿಕೇರಿ, ನೌಕರರ ಸಂಘದ ಅಧ್ಯಕ್ಷ ಉತ್ಪಲ್ ಶಿರೋಡ್ಕರ ಶಿರಸಿ ಅರ್ಬನ್ ಬ್ಯಾಂಕ್ ನಿರ್ದೇಶಕ ಟಿ.ಎಸ್. ಬಾಲಮಣಿ, ಕೊಂಕಣಿ ಅಕಾಡೆಮಿ ಮಾಜಿ ಅಧ್ಯಕ್ಷ ಆರ್.ಪಿ. ನಾಯಕ, ಶಾರದಾ ಪರಶುರಾಮ, ಕರ್ನಾಟಕ ಸಂಘದ ಅಧ್ಯಕ್ಷ ಯು.ಎಸ್. ಪಾಟೀಲ, ಕಾರ್ಯದರ್ಶಿ ಕೀರ್ತಿ ಗಾಂವಕರ, ಪ್ರೆಸ್ ಕ್ಲಬ್ ಅಧ್ಯಕ್ಷ ಸಂದೇಶ ಜೈನ ಸೇರಿದಂತೆ ಕಸಾಪದ ಪ್ರಮುಖರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.