ಕಾರವಾರ: ಕ್ಷೇತ್ರದ ಬಿಜೆಪಿ ಶಾಸಕಿ ರೂಪಾಲಿ ನಾಯ್ಕ ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತೆಯರಿಗೆ ಗುರುವಾರ ಸಂಜೆ ಇಲ್ಲಿನ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಸೀರೆ ಹಂಚಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
‘ಸಭೆಯ ಹೆಸರಿನಲ್ಲಿ ಕಾರ್ಯಕರ್ತೆಯರನ್ನು ಕರೆಯಲಾಗಿತ್ತು. ಈ ವೇಳೆ ಸೀರೆ ಅಥವಾ ಇತರ ಉಡುಗೋರೆ ನೀಡಿರಬಹುದು. ಮತದಾರರ ಪಟ್ಟಿ ಪರಿಷ್ಕರಣೆ ಮಾಡುವ ವೇಳೆ ಬೂತ್ ಲೆವಲ್ ಅಧಿಕಾರಿಗಳಾಗಿ (ಬಿ.ಎಲ್.ಒ.) ಕಾರ್ಯನಿರ್ವಹಿಸುವ ಅಂಗನವಾಡಿ ಕಾರ್ಯಕರ್ತಯರಿಗೆ ಚುನಾವಣೆ ಸಮೀಪಿಸಿದ ವೇಳೆ ಸೀರೆ ಹಂಚಿಕೆ ಮಾಡಿರುವುದು ತಪ್ಪು’ ಎಂದು ಕಾಂಗ್ರೆಸ್ ಮುಖಂಡ ಸತೀಶ್ ಸೈಲ್ ಹೇಳಿದ್ದಾರೆ.
‘ಶಾಸಕರು ಸ್ವಂತ ಖರ್ಚಿನಲ್ಲಿ ಈ ಮೊದಲೇ ಸೀರೆ ನೀಡಲು ನಿರ್ಧರಿಸಿದ್ದರು. ಸಮಯಾವಕಾಶ ಆಗಿರಲಿಲ್ಲ. ಹೀಗಾಗಿ ಈಗ ನೀಡಿದ್ದಾರೆ’ ಎಂದು ಬಿಜೆಪಿ ಮುಖಂಡರೊಬ್ಬರು ಪ್ರತಿಕ್ರಿಯಿಸಿದ್ದಾರೆ.
ಸೀರೆ ಹಂಚಿಕೆ ವಿಚಾರವಾಗಿ ಪ್ರತಿಕ್ರಿಯೆ ಪಡೆಯಲು ಸಂಪರ್ಕಿಸಲು ಪ್ರಯತ್ನಿಸಲಾಯಿತಾದರೂ ಶಾಸಕಿ ರೂಪಾಲಿ ನಾಯ್ಕ ಸಂಪರ್ಕಕ್ಕೆ ಸಿಗಲಿಲ್ಲ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.