ಶುಕ್ರವಾರ, ಜನವರಿ 27, 2023
25 °C

ಜನಾರ್ದನ ರೆಡ್ಡಿ ಬೇರೆ ಪಕ್ಷ ಕಟ್ಟುವ ಪ್ರಶ್ನೆಯೇ ಇಲ್ಲ: ಶ್ರೀರಾಮುಲು 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಲ್ಲಾಪುರ: ‘ಜನಾರ್ದನ ರೆಡ್ಡಿ ಒಂದು ವೇಳೆ ಪಕ್ಷ ಕಟ್ಟಿದರೆ, ಸ್ನೇಹ ಬೇರೆ ಪಕ್ಷ ಬೇರೆ. ನಾನು ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ. ಸ್ನೇಹ ಮತ್ತು ಪಕ್ಷ ಎರಡನ್ನೂ ಒಟ್ಟಾಗಿಯೇ ಇರುವಂತೆ ಮಾಡುತ್ತೇನೆ’ ಎಂದು ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದ‌್ದಾರೆ.

ತಾಲ್ಲೂಕಿನ ಮಾಗೋಡಿನಲ್ಲಿ ಸಿದ್ದಿ ಸಮುದಾಯದವರ ಮನೆಯಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಗುರುವಾರ ರಾತ್ರಿ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

'ಜನಾರ್ದನ ರೆಡ್ಡಿ ಅವರು ಬಿಜೆಪಿಯನ್ನು ಕಟ್ಟಿ ಬೆಳೆಸಿದ ನಾಯಕರಲ್ಲೊಬ್ಬರು. ಅವರು ಈ ಪಕ್ಷವನ್ನು ಬಿಟ್ಟು ಬೇರೆ ಪಕ್ಷ ಕಟ್ಟುವ ಪ್ರಶ್ನೆಯೇ ಇಲ್ಲ. ಪಕ್ಷದೊಳಗೇ ಇರುತ್ತಾರೆ'  ಎಂದೂ ಪತ್ರಕರ್ತರ ಪ್ರಶ್ನೆಗೆ ಸ್ಪಷ್ಟಪಡಿಸಿದರು.

ಹೊಸ ಬಸ್ ಖರೀದಿ: 'ಸಾರಿಗೆ ಇಲಾಖೆಯ ನಿಗಮಗಳ ಪುನಶ್ಚೇತನಕ್ಕೆ ಪ್ರಯತ್ನಿಸಲಾಗುತ್ತಿದೆ. ಸಿಬ್ಬಂದಿ ಕೊರತೆ ನೀಗಿಸಲು 2 ಸಾವಿರ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುತ್ತದೆ. ಈ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಸಾರಿಗೆಯನ್ನು ಹೆಚ್ಚಿಸಲು ಆದ್ಯತೆ ನೀಡಲಾಗುತ್ತಿದೆ. 30 ಸಾವಿರ ಬಸ್‌ಗಳನ್ನು ಬದಲಾಗಿ ಹೊಸ ಬಸ್ ಖರೀದಿಸಲಾಗುವುದು' ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು