ಶಿರಸಿ: ಅರಣ್ಯ ಭೂಮಿ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನೀಡಿದ್ದ ರಕ್ಷಣಾತ್ಮಕ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿರುವುದು ಅರಣ್ಯವಾಸಿಗಳಲ್ಲಿ ಆತಂಕ ಮೂಡಿಸಿದ್ದು, ಈ ಹಿನ್ನೆಲೆಯಲ್ಲಿ ಅರಣ್ಯವಾಸಿಗಳ ಪರವಾಗಿ ವಾದ ಮಂಡಿಸಲು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು ಪ್ರಕರಣದಲ್ಲಿ ಪ್ರತಿವಾದಿಯಾಗಿ ಸೇರ್ಪಡೆಗೊಳ್ಳಲು ನಿರ್ಧರಿಸಿದೆ ಎಂದು ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.

‘ಬೆಂಗಳೂರಿನ ಜಗದೀಶ ಎಂಬುವವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ವಿ.ಬೂ.ಬಕ್ರೂ ಹಾಗೂ ನ್ಯಾಯಮೂರ್ತಿ ಸಿ.ಎಂ.ಪೊನ್ನಚ್ಚ ಅವರಿದ್ದ ಪೀಠವು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, 2026ರ ಜುಲೈ 8ಕ್ಕೆ ವಿಚಾರಣೆ ನಿಗದಿಪಡಿಸಿದೆ. ಕೇಂದ್ರ ಸರ್ಕಾರದ ಪೂರ್ವಾನುಮತಿ ಇಲ್ಲದೆ ಅರಣ್ಯ ಭೂಮಿಯನ್ನು ಅರಣ್ಯೇತರ ಚಟುವಟಿಕೆಗೆ ಬಳಸುವಂತಿಲ್ಲ ಎಂಬ ಕಾಯಿದೆಯಡಿ 3 ಎಕರೆಗಿಂತ ಕಡಿಮೆ ಭೂಮಿ ಹೊಂದಿರುವವರನ್ನು ಒಕ್ಕಲೆಬ್ಬಿಸಬಾರದು ಎಂಬ ರಾಜ್ಯ ಸರ್ಕಾರದ 2015ರ ಆದೇಶವನ್ನು ಅರ್ಜಿದಾರರು ಪ್ರಶ್ನಿಸಿದ್ದಾರೆ. ಸುಪ್ರೀಂ ಕೋರ್ಟ್ನ ಹಳೆಯ ಆದೇಶಗಳನ್ನು ಜಾರಿಗೆ ತಂದು ಅನಧಿಕೃತ ಒತ್ತುವರಿ ತೆರವುಗೊಳಿಸಲು ವಿಶೇಷ ತಂಡ ರಚಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ’ ಎಂದು ತಿಳಿಸಿದ್ದಾರೆ.

‘ಹಿಂದೆ ನಡೆದ ನಿರಂತರ ಹೋರಾ ಟಗಳ ಫಲವಾಗಿ ಸಿದ್ದರಾಮಯ್ಯ ನೇತೃತ್ವದ ಅಂದಿನ ಸರ್ಕಾರವು 3 ಎಕರೆಗಿಂತ ಕಡಿಮೆ ಸಾಗುವಳಿ ಮಾಡುವವರ ಹಿತರಕ್ಷಣೆಗಾಗಿ ಈ ಆದೇಶ ಹೊರಡಿಸಿತ್ತು. ಆದರೆ ಈಗ ಈ ಆದೇಶದ ಕಾನೂನು ಬದ್ಧತೆಯನ್ನು ಪ್ರಶ್ನಿಸುತ್ತಿರುವುದು ವಿಷಾದನೀಯ. ಜಿಲ್ಲೆಯೊಂದರಲ್ಲೇ ಸುಮಾರು 67,064 ಕುಟುಂಬಗಳು 3 ಎಕರೆಗಿಂತ ಕಡಿಮೆ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದೆ’ ಎಂದು ಅವರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-20-891608144

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.