ಕಾರವಾರ: ಹೊನ್ನಾವರ ತಾಲ್ಲೂಕಿನ ಗುಡ್ಡೇಬಾಳಕ್ರಾಸ್ನಲ್ಲಿ ಗುರುವಾರ ಹೆದ್ದಾರಿಯ ಒಂದ ಭಾಗದ ಮೇಲೆ ಗುಡ್ಡ ಕುಸಿತವಾಗಿದೆ. ಚಿರೆಕಲ್ಲಿನ ಬಂಡೆ ಮತ್ತು ಮಣ್ಣು ಬಿದ್ದಿದ್ದು, ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ.

ಹೊನ್ನಾವರ- ಗೇರುಸೊಪ್ಪ ನಡುವೆ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ. ಕರಾವಳಿಯಲ್ಲಿ ಗುರುವಾರವೂ ಮಳೆ ಜೋರಾಗಿ ಸುರಿಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ನೀಡಿದೆ. ಮುಂದಿನ ಮೂರು ದಿನ ಜೋರಾಗಿ ವರ್ಷಧಾರೆಯಾಗುವ ಸಾಧ್ಯತೆಯಿದೆ. ಭಾರಿ ಗಾತ್ರದ ಅಲೆಗಳು ಏಳುತ್ತಿದ್ದು, ಮೀನುಗಾರರು ಮತ್ತು ಸಾರ್ವಜನಿಕರು ಸಮುದ್ರಕ್ಕೆ ಇಳಿಯಬಾರದು ಎಂದು ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಸಮಿತಿ ಸೂಚಿಸಿದೆ.

ಘಟ್ಟ ಪ್ರದೇಶದಲ್ಲಿಯೂ ಉತ್ತಮ ಮಳೆಯಾಗುತ್ತಿದ್ದು, ಜಲಾಶಯಗಳಿಗೆ ಒಳಹರಿವು ಹೆಚ್ಚಿದೆ. ಸೂಪಾ ಜಲಾಶಯದ ಮೇಲ್ಭಾಗದಲ್ಲಿರುವ ಅಪ್ಪರ್ ಕಾನೇರಿ ಜಲಾಶಯದಿಂದ ಕಾಳಿ ನದಿಗೆ ನೀರು ಹರಿಸಲಾಗಿದೆ. ಹಾಗಾಗಿ ಕೆಳಭಾಗದ ಕೆಲವು ಸೇತುವೆಗಳು ಜಲಾವೃತವಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.