ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

SSLC Result | 624 ಅಂಕ ಪಡೆದ ಶಿರಾ ವಿದ್ಯಾರ್ಥಿನಿ; ರಾಜ್ಯಕ್ಕೆ 2ನೇ ರ‍್ಯಾಂಕ್

Published 9 ಮೇ 2024, 8:29 IST
Last Updated 9 ಮೇ 2024, 8:29 IST
ಅಕ್ಷರ ಗಾತ್ರ

ಶಿರಾ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನಗರದ ವಾಸವಿ ಶಾಲೆಯ ವಿದ್ಯಾರ್ಥಿನಿ ಡಿ.ಎಂ.ಹರ್ಷಿತ 625ಕ್ಕೆ 624 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ 2ನೇ ರ‍್ಯಾಂಕ್ ಪಡೆದಿದ್ದಾರೆ.

ಶಿಕ್ಷಣ ಇಲಾಖೆಯಲ್ಲಿ ಸಿಆರ್‌ಪಿ ಆಗಿರುವ ಜಿ.ಮಂಜುನಾಥ್ ಹಾಗೂ ಮಂಜುಳಾ ದಂಪತಿಯ ಪುತ್ರಿ ಡಿ.ಎಂ.ಹರ್ಷಿತ ಅವರಿಗೆ ಕನ್ನಡದಲ್ಲಿ 125, ಇಂಗ್ಲಿಷ್‌ 100, ಹಿಂದಿ 100, ಗಣಿತ 99, ವಿಜ್ಞಾನ 100, ಸಮಾಜ ವಿಜ್ಞಾನ 100 ಅಂಕಗಳು ಸೇರಿದಂತೆ ಒಟ್ಟು 624 (ಶೇ.99.84) ಅಂಕಗಳು ಬಂದಿವೆ.

'ಪೋಷಕರು ಹಾಗೂ ಶಿಕ್ಷಕರ ಸಹಕಾರದಿಂದ ಉತ್ತಮ ಸಾಧನೆ ಮಾಡಲು ಸಾಧ್ಯವಾಯಿತು. ಅಂದಿನ ಪಾಠವನ್ನು ಅಂದೇ ಅಭ್ಯಾಸ ಮಾಡುತ್ತಿದ್ದೆ. ಮನೆಯಲ್ಲಿ ಪ್ರತಿನಿತ್ಯ 4 ಗಂಟೆ ಅಭ್ಯಾಸ ನಡೆಸುತ್ತಿದ್ದೆ. ಮನೆ ಪಾಠಕ್ಕೆ ಹೋಗದೆ ಶಾಲೆ ಮತ್ತು ಮನೆಯಲ್ಲಿ ಅಭ್ಯಾಸ ಮಾಡುವ ಮೂಲಕ ಉತ್ತಮ ಅಂಕಗಳನ್ನು ಪಡೆದಿರುವುದು ಖುಷಿಯ ವಿಷಯ. ಮುಂದೆ ವೈದ್ಯೆಯಾಗುವ ಕನಸು ಇದೆ' ಎಂದು ಹರ್ಷಿತ ಖುಷಿ ಹಂಚಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT