ಕಾರವಾರ: ‘ಪ್ರಶಿಕ್ಷಣ ವರ್ಗ ಪಕ್ಷ ಸಂಘಟನೆಗೆ ಪೂರಕ ಮತ್ತು ಕಾರ್ಯಕರ್ತರಲ್ಲಿ ಒಗ್ಗಟ್ಟು, ಶಿಸ್ತು ಮೂಡಿಸಲು ಉತ್ತಮ ವೇದಿಕೆ ಒದಗಿಸಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಹೇಳಿದರು.

ತಾಲ್ಲೂಕಿನ ಸದಾಶಿವಗಡದ ಪುರುಷೋತ್ತಮ ಸಭಾಂಗಣದಲ್ಲಿ ಬಿಜೆಪಿ ಗ್ರಾಮೀಣ ಘಟಕದಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ಪಂಡಿತ್ ದೀನ ದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.

‘ಜನಸಾಮಾನ್ಯರೊಂದಿಗೆ ಬೆರೆತು, ಅವರ ಸಮಸ್ಯೆಗಳನ್ನು ಅರಿ ಯುವ ಜೊತೆಗೆ ಸರ್ಕಾರಕ್ಕೆ ಸಮಸ್ಯೆ ಮನದಟ್ಟು ಮಾಡುವ ಕೆಲಸಕ್ಕೆ ಕಾರ್ಯಕರ್ತರು ನೆರವಾಗಬೇಕು. ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು. ಪಕ್ಷದ ಸಂಘಟನೆ ಕೇವಲ ಚುನಾವಣೆ ಸಮೀಪಿಸಿದಾಗ ಮಾಡುವುದಲ್ಲ. ಆ ಕೆಲಸ ನಿರಂತರವಾಗಿ ನಡೆಯಬೇಕು’ ಎಂದರು.

ಗ್ರಾಮೀಣ ಘಟಕದ ಅಧ್ಯಕ್ಷ ಸುಭಾಷ್ ಗುನಗಿ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಮಾಜಿ ಅಧ್ಯಕ್ಷ ರವಿರಾಜ ಅಂಕೋಲೆಕರ, ನಗರ ಘಟಕದ ಅಧ್ಯಕ್ಷ ನಾಗೇಶ್ ಕುರಡೇಕರ್, ಅಂಕೋಲಾ ಘಟಕದ ಅಧ್ಯಕ್ಷ ಸಂಜಯ ನಾಯ್ಕ, ಗಜಾನನ ಗುನಗಾ, ಸುಬ್ರಾಯ ದೇವಾಡಿಗ, ಶ್ರೀಕಾಂತ್ ನಾಯ್ಕ, ಸಂಜಯ್ ಸಾಳುಂಕೆ, ನಯನಾ ನೀಲಾವರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-20-243295992

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.