ಕಾರವಾರ: ‘ಎಸ್ಐಆರ್ ಕುರಿತು ಕಾರ್ಯಕರ್ತರು ಎಚ್ಚರ ವಹಿಸಬೇಕು. ಬಿಎಲ್ಎ–2 ಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಜನಮಾನ್ಯರಿಗೆ ನೀಡಿದ ಸೌಲಭ್ಯಗಳನ್ನು ಮನೆ ಮನೆಗೆ ತಲುಪಿಸಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಹೇಳಿದರು.

ಬಿಜೆಪಿ ನಗರ ಮತ್ತು ಗ್ರಾಮೀಣ ಮಂಡಲಗಳ ಕಾರ್ಯಕರ್ತರಿಗೆ ಶನಿವಾರ ಇಲ್ಲಿನ ಪಕ್ಷದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಬಿಎಲ್ಎ 2 ಮತ್ತು ಬೂತ್ ಅಧ್ಯಕ್ಷರ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು.

‘ಪಕ್ಷ ಬೆಳೆದಂತೆ ಪ್ರತಿಯೊಬ್ಬ ಕಾರ್ಯಕರ್ತರೂ ಬೆಳೆಯುತ್ತಾರೆ. ಪಕ್ಷ ಇನ್ನಷ್ಟು ಬೆಳವಣಿಗೆ ಸಾಧಿಸಲು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು’ ಎಂದರು.

ಪಕ್ಷದ ನಗರ ಘಟಕದ ಅಧ್ಯಕ್ಷ ನಾಗೇಶ ಕುರ್ಡೇಕರ ಪ್ರಾಸ್ತಾವಿಕ ಮಾತನಾಡಿ, ‘ಪಕ್ಷ ಸಂಘಟನೆಯಲ್ಲಿ ಬೂತ್ ಮಟ್ಟದ ಸಂಘಟನೆ ಪ್ರಮುಖ ಪಾತ್ರ ವಹಿಸಲಿದೆ’ ಎಂದು ತಿಳಿಸಿದರು.

ಗ್ರಾಮೀಣ ಮಂಡಲದ ಅಧ್ಯಕ್ಷ ಸುಭಾಷ್ ಗುನಗಿ ಮಾತನಾಡಿ, ‘ಪ್ರತಿಯೊಬ್ಬ ಕಾರ್ಯಕರ್ತರು ತಮಗೆ ನೀಡಿದ ಜವಾಬ್ದಾರಿಯನ್ನು ಅರಿತು ಆ ನಿಟ್ಟಿನಲ್ಲಿ ಕೆಲಸ ಮಾಡಬೇಕು’ ಎಂದರು.

ಪಕ್ಷದ ಪ್ರಮುಖರಾದ ಗಜಾನನ ಗುನಗಾ, ಸುನಿಲ್ ಸೋನಿ, ಕಿಶನ್ ಕಾಂಬಳೆ, ಉದಯ ನಾಯ್ಕ, ಸೂರಜ್ ದೇಸಾಯಿ, ಅಶೋಕ ಗೌಡ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-20-770437429

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.