ಕಾರವಾರ: ಜಾತಿ ನಿಂದನೆ ಪ್ರಕರಣ ಎದುರಿಸುತ್ತಿರುವ ಆರೋಪಿಯ ಬಂಧನಕ್ಕೆ ತೆರಳಿದ ಪೊಲೀಸರ ಮೇಲೆ ಆರೋಪಿ ಪ್ರವೀಣ ಮನೋಹರ ಸುಧೀರ (37) ಹಲ್ಲೆಗೆ ಯತ್ನಿಸಿದ ಹಿನ್ನೆಲೆಯಲ್ಲಿ ಆತನ ಕಾಲಿಗೆ ಗುಂಡೇಟು ನೀಡಿ ಬಂಧಿಸಿದ ಘಟನೆ ಸೋಮವಾರ ಯಲ್ಲಾಪುರ ತಾಲ್ಲೂಕಿನ ಕಣ್ಣಿಗೇರಿ ಸಮೀಪದ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಜೊಯಿಡಾ ತಾಲ್ಲೂಕು ರಾಮನಗರ ಪೊಲೀಸ್ ಠಾಣೆಯಲ್ಲಿ ಸುಧೀರ ವಿರುದ್ಧ ಮಾ.31 ರಂದು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಜಾತಿ ನಿಂದನೆ ಮಾಡಿದ್ದ ಪ್ರಕರಣ ದಾಖಲಾಗಿತ್ತು. ಪರಾರಿಯಾಗಿದ್ದ ಆರೋಪಿಯು ಕಣ್ಣಿಗೇರಿ ಅರಣ್ಯ ಪ್ರದೇಶದಲ್ಲಿ ಆರೋಪಿ ಅಡಗಿರುವ ಮಾಹಿತಿ ಆಧರಿಸಿ ಪೊಲೀಸರು ದಾಳಿ ಮಾಡಿದ್ದರು.

‘ಆರೋಪಿಯು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದು, ಜೀವ ರಕ್ಷಣೆಗೆ ಆತನ ಕಾಲಿಗೆ ಗುಂಡು ಹಾರಿಸಲಾಗಿದೆ. ಆತನ ವಿರುದ್ಧ ರಾಮನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 16 ಪ್ರಕರಣಗಳು ದಾಖಲಾಗಿದ್ದು, ರೌಡಿ ಶೀಟರ್ ಪಟ್ಟಿಯಲ್ಲಿದ್ದಾನೆ. ಘಟನೆಯಲ್ಲಿ ಯಲ್ಲಾಪುರ ಠಾಣೆಯ ಎಸ್ಐ ಮಹಾಂತೇಶ ನಾಯಕ, ಸಿಬ್ಬಂದಿ ಜಾಫರ್ ಅದರಗುಂಚಿ, ಅಸ್ಮಂ ಘಟ್ಟದ, ಮಲ್ಲಿಕಾರ್ಜುನ ಹೊಸ್ಮನಿ ಗಾಯಗೊಂಡಿದ್ದಾರೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.