ಕಾರವಾರ: ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಕಗೊಂಡ ಗಂಗೂಬಾಯಿ ಮಾನಕರ್ ಬುಧವಾರ ಅಧಿಕಾರ ಸ್ವೀಕರಿಸಿದರು.
ಹಿಂದಿನ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು.
ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳು, ಸಿಬ್ಬಂದಿ ಹೂಗುಚ್ಛಗಳನ್ನು ನೀಡಿ ಗಂಗೂಬಾಯಿ ಅವರನ್ನು ಸ್ವಾಗತಿಸಿಕೊಂಡರು.
'ಜಿಲ್ಲೆಯಲ್ಲಿ ನೆರೆ ಹಾನಿ ಪರಿಸ್ಥಿತಿ ನಿಭಾಯಿಸಲು ಅಧಿಕಾರಿಗಳಿಗೆ ಸೂಚನೆ ಕೊಡಲಾಗುವುದು. ಜನ ಜಾನುವಾರುಗಳಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗುವುದು' ಎಂದರು.
'ಜಿಲ್ಲೆಯಲ್ಲಿ ಈ ಹಿಂದೆ ಕೆಲಸ ಮಾಡಿದ ಅನುಭವ ಇದೆ. ಕರಾವಳಿ, ಮಲೆನಾಡು ಪ್ರದೇಶವನ್ನು ಒಳಗೊಂಡ ಜಿಲ್ಲೆಯಲ್ಲಿ ಕೆಲಸ ಮಾಡುವುದೇ ವಿಶಿಷ್ಟ ಅನುಭವ' ಎಂದು ಪ್ರತಿಕ್ರಿಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.