ಕಾರವಾರ: ಅಂಕೋಲಾದಲ್ಲಿ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯಕ ಮೇಲೆ ನಡೆದ ಕೊಲೆ ಯತ್ನದ ಪ್ರಮುಖ ಆರೋಪಿಗಳಾದ ಗೋವಾದ ಮೊಹಮ್ಮದ್ ಇಮ್ರಾನ ಸಲ್ಮಾನಿ (46) ಮತ್ತು ಹಾವೇರಿ ಜಿಲ್ಲೆ ಹಿರೇಕೆರೂರಿನ ಅಬ್ದುಲ್ ಗನಿ (31) ಸುಳಿವು ನೀಡಿದವರಿಗೆ ₹25 ಸಾವಿರ ಬಹುಮಾನ ನೀಡುವುದಾಗಿ ಪೊಲೀಸ್ ಇಲಾಖೆ ಘೋಷಿಸಿದೆ.

ಮಾ.24ರಂದು ಅಂಕೋಲಾ ಪಟ್ಟಣದಲ್ಲಿ ಹಲ್ಲೆ ನಡೆಸಿ, ಹತ್ಯೆಗೆ ಯತ್ನ ನಡೆದಿತ್ತು. ‘ಘಟನೆ ನಡೆದ ದಿನದಿಂದಲೇ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಅವರ ಸುಳಿವು ಮಾಹಿತಿ ಇದ್ದಲ್ಲಿ ಪೊಲೀಸ್ ನಿರೀಕ್ಷಕರನ್ನು (9480805258) ಸಂಪರ್ಕಿಸಬಹುದು.

ಮಾಹಿತಿದಾರರಿಗೆ ತಲಾ ₹25 ಸಾವಿರ ಬಹುಮಾನ ನೀಡಲಾಗುವುದು ಹಾಗೂ ಮಾಹಿತಿದಾರರ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು’ ಎಂದು ಪ್ರಕರಣದ ತನಿಖಾಧಿಕಾರಿಯಾಗಿರುವ ಯಲ್ಲಾಪುರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-20-177028794

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.