ಕಾರವಾರ: ‘ಕೇವಲ ಅಂಕ ಗಳಿಕೆಯ ಉದ್ದೇಶದಿಂದ ಮಾತ್ರ ಓದದೇ ಜೀವನದಲ್ಲಿ ತಮ್ಮ ಕನಸನ್ನು ನನಸು ಮಾಡಿಕೊಳ್ಳುವ ಕಡೆಗೆ ಗಮನ ಹರಿಸಬೇಕು. ಅಂಕ ಕೇವಲ ಮಾನದಂಡವಾಗಿದ್ದು, ಒಂದೊಂದು ಅಂಕ ವಿದ್ಯಾರ್ಥಿಯ ಮನೋ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ’ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಹೇಳಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ 2025–26ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಅತಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಅಭಿನಂದನೆ ಸಲ್ಲಿಕೆ ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಆತ್ಮ ಸ್ಥೈರ್ಯದಿಂದ ಕಾರ್ಯ ಸಿದ್ಧಿ ಸಾಧ್ಯ. ವಿದ್ಯಾರ್ಥಿಗಳು ಓದಿನ ಜೊತೆಗೆ ಇತರೆ ಉತ್ತಮ ಹವ್ಯಾಸಗಳನ್ನೂ ರೂಢಿಸಿಕೊಳ್ಳಬೇಕು. ಜೀವನದಲ್ಲಿ ಸತತ ಪ್ರಯತ್ನ ಮುಖ್ಯವಾಗಿದೆ’ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಡಾ.ದಿಲೀಷ್ ಶಶಿ ಮಾತನಾಡಿ, ‘ಸರ್ಕಾರಿ ಶಾಲೆಯಲ್ಲಿ ಓದಿ ರಾಜ್ಯಕ್ಕೆ ರ್ಯಾಂಕ್ ಬಂದ ವಿದ್ಯಾರ್ಥಿಗಳ ಸಾಧನೆ ಅತೀ ದೊಡ್ಡದು. ಜೀವನದಲ್ಲಿ ಗುರಿ ಸಾಧಿಸಲು ಸತತ ಪ್ರಯತ್ನವಿರಬೇಕು. ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಉತ್ತಮ ಸಾಧನೆ ಮಾಡುವ ಕಡೆ ಗಮನ ಹರಿಸಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಅವರೊಂದಿಗೆ ವಿದ್ಯಾರ್ಥಿಗಳು ಶೈಕ್ಷಣಿಕ ವಿಷಯಗಳ ಕುರಿತು ಸಂವಾದ ನಡೆಸಿದರು. ಈ ವೆಳೆ ಕೆಲವರು ಕುಗ್ರಾಮಗಳಿಂದ, ಬಸ್ಗಳಿಲ್ಲದ ಊರಿನಿಂದ ಶಾಲೆಗೆ ತೆರಳಿ ಸಾಧನೆ ಮಾಡಿದ ಸಂಗತಿ ಗಮನಕ್ಕೆ ತಂದರು.

ಯಲ್ಲಾಪುರದ ಸಮೃದ್ಧಿ ಭಾಗ್ವತ, ಭಟ್ಕಳದ ಸಾನಿಕಾ ಬೈಲೂರ್, ವೈಭವಿ ನಾಯ್ಕ, ಹೊನ್ನಾವರದ ದೇವಿಕಾ ಪೈ, ಕುಮಟಾದ ದಿಶಾಂತ್ ನಾಯ್ಕ, ಶಿರಸಿಯ ಅದಿತಿ ನಾಯ್ಕ, ಲತಿಕಾ ಹಾಗೂ ಇತರ ವಿದ್ಯಾರ್ಥಿಗಳು ಸಂವಾದದಲ್ಲಿ ಪಾಲ್ಗೊಂಡು ಅನಿಸಿಕೆ ಹಂಚಿಕೊಂಡರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕಿ ಲತಾ ನಾಯಕ, ಕುಮಟಾ ಡಯಟ್ ಉಪನಿರ್ದೇಶಕ ಎನ್.ಆರ್.ಹೆಗಡೆ, ಶಿಕ್ಷಣಾಧಿಕಾರಿ ಶುಭಾ ನಾಯಕ, ಜಿಲ್ಲಾ ಯೋಜನಾ ಉಪ ಸಮನ್ವಯ ಆಧಿಕಾರಿ ಭಾಸ್ಕರ ಗಾಂವಕರ, ಡಯಟ್ ಹಿರಿಯ ಉಪನ್ಯಾಸಕಿ ಭಾರತಿ ನಾಯ್ಕ, ವಿದ್ಯಾರ್ಥಿಗಳು ಮತ್ತು ಪೋಷಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-20-2101987192

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.