ಕಾರವಾರ: ‘ಜಿಲ್ಲೆಯ ವ್ಯಾಪ್ತಿಯಲ್ಲಿರುವ ರೆಸಾರ್ಟ್, ಹೋಂ ಸ್ಟೇಗಳಲ್ಲಿ ಮಾದಕ ವಸ್ತು ಸೇವನೆ ಚಟುವಟಿಕೆ ನಡೆಸದಂತೆ ನಿಗಾ ಇರಿಸುವ ಕೆಲಸ ಆಗಬೇಕು’ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಸೂಚಿಸಿದರು.

‘ಮಾದಕ ವಸ್ತುಗಳ ಬಳಕೆ ಮತ್ತು ಸರಬರಾಜು ತಡೆಯಲು ಶಂಕಾಸ್ಪದವಾಗಿ ಕಂಡು ಬರುವ ಹೋಂ ಸ್ಟೇ ಮತ್ತು ರೆಸಾರ್ಟ್ಗಳಲ್ಲಿ ಅನಿರೀಕ್ಷಿತ ತಪಾಸಣೆಗಳನ್ನು ಕೈಗೊಳ್ಳಿ’ ಎಂದು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್ಕಾರ್ಡ್ ಸಮಿತಿ ಸಭೆಯಲ್ಲಿ ಆದೇಶಿಸಿದರು.

‘ಪೊಲೀಸ್ ಇಲಾಖೆಯಲ್ಲಿ ದಾಖಲಾಗುವ ಪ್ರಕರಣಗಳಲ್ಲಿ 18ರಿಂದ 35 ವಯೋಮಿತಿಯ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಈ ದುಶ್ಚಟಕ್ಕೆ ಬಲಿಯಾಗುತ್ತಿರುವುದು ಕಂಡು ಬರುತ್ತಿದೆ. ಯುವಜನರಲ್ಲಿ ಮಾದಕ ವಸ್ತು ಸೇವನೆ ವಿರುದ್ಧ ಜಾಗೃತಿ ಮೂಡಿಸುವ ಕೆಲಸ ಪರಿಣಾಮಕಾರಿಯಾಗಿ ಆಗಬೇಕು’ ಎಂದರು.

‘ಔಷಧ ಮಳಿಗೆಗಳಲ್ಲಿ ವೈದ್ಯರ ಸಲಹೆ ಚೀಟಿ ಇಲ್ಲದೇ ಔಷಧಗಳನ್ನು ಸರಬರಾಜು ಮಾಡದಂತೆ ಸೂಚನೆ ನೀಡಬೇಕು. ಈ ಕುರಿತು ಭಿತ್ತಿಪತ್ರ ಅಳವಡಿಸುವ ಕುರಿತು ಅಗತ್ಯ ಕ್ರಮ ಕೈಗೊಳ್ಳಬೇಕು. ನೋವು ನಿವಾರಕ ಮಾತ್ರೆಗಳ ಮಾರಾಟದ ಮೇಲೆಯೂ ನಿಗಾ ಇರಿಸಬೇಕು’ ಎಂದು ಜಿಲ್ಲಾ ಔಷಧ ನಿಯಂತ್ರಕರಿಗೆ ಸೂಚಿಸಿದರು.

‘ಕಳೆದ ನಾಲ್ಕು ತಿಂಗಳಿನಲ್ಲಿ ಮಾದಕ ವಸ್ತು ಸರಬರಾಜಿನ 8 ಪ್ರಕರಣ ದಾಖಲಿಸಿದ್ದು, 14 ಮಂದಿಯನ್ನು ಬಂಧಿಸಿ ₹1.49 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ. ಮಾದಕ ವಸ್ತು ಸೇವನೆಯ 97 ಪ್ರಕರಣಗಳಲ್ಲಿ 112 ಮಂದಿಯನ್ನು ಬಂಧಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ತಿಳಿಸಿದರು.

ಸಭೆಯಲ್ಲಿ ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಬಂದರು, ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-20-2081338770

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.