ಹೊಸದಾಗಿ ರಂಗಮಂದಿರ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ಸಿಕ್ಕ ಬಳಿಕ ಈಗಿನ ಕಟ್ಟಡ ತೆರವುಗೊಳಿಸುವ ಪ್ರಕ್ರಿಯೆ ನಡೆಯಲಿದೆ.
– ಮಂಗಲಾ ನಾಯ್ಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ
₹8.80 ಕೋಟಿಗೆ ಪ್ರಸ್ತಾವ
‘ಜಿಲ್ಲಾ ರಂಗಮಂದಿರ ಕಟ್ಟಡವನ್ನು ಹೊಸದಾಗಿ ನಿರ್ಮಿಸಲು ₹8.80 ಕೋಟಿ ವೆಚ್ಚ ತಗುಲಬಹುದು ಎಂದು ಲೋಕೋಪಯೋಗಿ ಇಲಾಖೆ ಅಂದಾಜು ಪಟ್ಟಿ ಸಿದ್ಧಪಡಿಸಿದೆ. ಇದನ್ನು ಆಧರಿಸಿ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಲಾ ನಾಯ್ಕ ‘ಪ್ರಜಾವಾಣಿ’ಗೆ ತಿಳಿಸಿದರು.