ಕಾರವಾರ: ‘ಪರಿಸರದಲ್ಲಿ ಸಮತೋಲನ ಕಾಪಾಡಲು ಶ್ರಮಿಸುವ ಮೂಲಕ ಹವಾಮಾನದಲ್ಲಿ ಉಂಟಾಗುವ ಬದಲಾವಣೆಗಳನ್ನು ನಿಯಂತ್ರಿಸುವಲ್ಲಿ ಅಧಿಕಾರಿಗಳ ಪಾತ್ರ ಪ್ರಮುಖವಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸೋಮಶೇಖರ ಮೇಸ್ತಾ ಹೇಳಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (ಎಂಪ್ರಿ) ವತಿಯಿಂದ ರಾಜ್ಯದ ಹವಾಮಾನ ಬದಲಾವಣೆಯ ಕುರಿತು ಕ್ರಿಯಾ ಯೋಜನೆ ತಯಾರಿಸುವ ಕುರಿತಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಹವಾಮಾನ ವೈಪರೀತ್ಯದಿಂದ ಉಂಟಾಗುತ್ತಿರುವ ಜಾಗತಿಕ ತಾಪಮಾನ ಏರಿಕೆ, ಅತಿವೃಷ್ಟಿ, ಬರಗಾಲ, ವಾಯು ಮಾಲಿನ್ಯಗಳನ್ನು ನಿಯಂತ್ರಿಸುವ ಜವಾಬ್ದಾರಿ ಸರಿಯಾಗಿ ನಿಭಾಯಿಸಲು ಸಾಧ್ಯವಿದೆ. ಈ ಮೂಲಕ ಅರಣ್ಯ, ಸಮುದ್ರ ಹಾಗೂ ವನ್ಯಜೀವಿಗಳ ನಾಶದಂತಹ ಪರಿಸ್ಥಿತಿಗಳನ್ನು ತಡೆಯುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳ ವ್ಯಾಪ್ತಿಯಲ್ಲಿ ಕೈಗೊಳ್ಳಬಹುದಾದ ನಿಯಂತ್ರಣ ಕ್ರಮಗಳ ಕುರಿತಂತೆ ಕ್ರಿಯಾ ಯೋಜನೆಯನ್ನು ರೂಪಿಸಬೇಕು. ಅದನ್ನು ಸಮರ್ಪಕವಾಗಿ ಜಾರಿಗೊಳಿಸುವ ಜವಾಬ್ದಾರಿಯನ್ನು ಅಧಿಕಾರಿಗಳು ನಿಭಾಯಿಸಬೇಕು’ ಎಂದರು.

ಎಂಪ್ರಿ ಸಂಸ್ಥೆಯ ಹವಾಮಾನ ಬದಲಾವಣೆ ವಿಭಾಗದ ಹಿರಿಯ ಸಮಾಲೋಚಕಿ ಬಿ.ಸರಿತಾ ಅಲ್ಪಾವಧಿಯ ಹವಾಮಾನ ಮಾಲಿನ್ಯಕಾರಕಗಳ ಪರಿಣಾಮ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿನ ಅವುಗಳ ದತ್ತಾಂಶಗಳ ಕುರಿತು ಮಾಹಿತಿ ನೀಡಿದರು.

ಕೆನಡಾದ ಯೂನಿವರ್ಸಿಟಿ ಆಫ್ ವಿನ್ನಪೆಗ್ನ ಪರಿಸರ ವಿಜ್ಞಾನ ವಿಭಾಗದ ಸಂಶೋಧನಾ ವಿಜ್ಞಾನಿ ಮಹಾಬಲೇಶ್ವರ ಹೆಗಡೆ ಸಾಯಿಮನೆ ಕಾರ್ಬನ್ ಕ್ರೆಡಿಟ್ ಸ್ಕೋರ್, ಹವಾಮಾನ ಬದಲಾವಣೆ ಉಪಕ್ರಮಗಳು, ಪ್ಯಾರಿಸ್ ಒಪ್ಪಂದದ ಕುರಿತು ವಿವರಿಸಿದರು.

ಜಲ ಸಂಪನ್ಮೂಲ ಇಲಾಖೆಯ ನಿರ್ದೇಶಕ ಸೋಮಶೇಖರ ರಾವ್ ಜಲ ಸಂಪನ್ಮೂಲದ ಬಗ್ಗೆ ಮಾಹಿತಿ ನೀಡಿದರು. ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಬಿ.ಕೆ.ಸಂತೋಷ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-20-1035146965

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.