ಕಾರವಾರ: ‘ಮುಂಗಾರು ಹಂಗಾಮು ಆರಂಭಕ್ಕೆ ಮುನ್ನ ರಸಗೊಬ್ಬರ, ಬಿತ್ತನೆ ಬೀಜಗಳನ್ನು ಅಗತ್ಯ ಪ್ರಮಾಣದಲ್ಲಿ ದಾಸ್ತಾನು ಮಾಡಬೇಕು. ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ ಮಾಡಿದ್ದು ಪತ್ತೆಯಾದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ’ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಎಚ್ಚರಿಸಿದರು.

‘ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಎಚ್ಚರವಹಿಸಿ. ಅಧಿಕಾರಿಗಳು ಆಗಾಗ್ಗೆ ರಸಗೊಬ್ಬರ ಉಗ್ರಾಣ, ಮಾರಾಟ ಮಳಿಗೆಗಳಿಗೆ ಭೇಟಿ ನೀಡಿ, ಪರಿಶೀಲಿಸಿ ವರದಿ ಸಲ್ಲಿಸುತ್ತಿರಬೇಕು’ ಎಂದು ಅವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಪೂರೈಕೆ ಕುರಿತು ನಡೆದ ಸಭೆಯಲ್ಲಿ ಸೂಚಿಸಿದರು.

‘ಮುಂಗಾರು ಹಂಗಾಮಿಗೆ ವಿವಿಧ ಗ್ರೇಡ್ಗಳ ಒಟ್ಟು 36,560 ಟನ್ ರಸಗೊಬ್ಬರಕ್ಕೆ ಬೇಡಿಕೆಯ ಅಂದಾಜಿದೆ. ಪ್ರತಿ ತಿಂಗಳು ಬೇಡಿಕೆಗೆ ಅಗತ್ಯವಿರುವಷ್ಟು ರಸಗೊಬ್ಬರ ರೈತರಿಗೆ ದೊರೆಯುವ ನಿಟ್ಟಿನಲ್ಲಿ ಅಗತ್ಯ ದಾಸ್ತಾನು ಮಾಡಿಕೊಂಡಿರಬೇಕು. ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಸರಬರಾಜು ಆಗುವಂತೆ ಎಚ್ಚರವಹಿಸಬೇಕು’ ಎಂದು ರಸಗೊಬ್ಬರ ಕಂಪನಿಯ ಪ್ರತಿನಿಧಿಗಳಿಗೆ ಸೂಚಿಸಿದರು.

‘ರೈತರು ಬೆಳೆಗಳಿಗೆ ಯೂರಿಯಾ ರಸಗೊಬ್ಬರದ ಜೊತೆಗೆ ಇತರೆ ಸಂಯುಕ್ತ ರಸಗೊಬ್ಬರಗಳನ್ನು ಬಳಸುವಂತೆಯೂ ಅರಿವು ಮೂಡಿಸುವ ಕೆಲಸವನ್ನು ಅಧಿಕಾರಿಗಳ ಜೊತೆಗೆ ಕೃಷಿ ವಿಜ್ಞಾನಿಗಳು ಮಾಡಬೇಕು’ ಎಂದರು.

‘ರೈತರಿಗೆ ಯೂರಿಯಾ ರಸಗೊಬ್ಬರ ಮಾರಾಟ ಮಾಡುವ ಸಂದರ್ಭದಲ್ಲಿ ಪ್ರೂಟ್ಸ್ ನೋಂದಣಿ ಸಂಖ್ಯೆ ಪಡೆಯುವುದು ಕಡ್ಡಾಯ. ಪ್ರೂಟ್ಸ್ ಸಂಖ್ಯೆಯನ್ನು ಪೋರ್ಟಲ್ನಲ್ಲಿ ಅಳವಡಿಸುವ ಬಗ್ಗೆ ರಸಗೊಬ್ಬರ ಪೂರೈಸುವ ಡೀಲರ್ಗಳಿಗೆ ತರಬೇತಿ ನೀಡಲಾಗಿದೆ. ರೈತರಿಗೂ ಈ ಕುರಿತು ಮಾಹಿತಿ ನೀಡಲಾಗುವುದು’ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವಪ್ರಸಾದ್ ಗಾಂವಕರ್ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮನವರ್, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಬಿ.ಪಿ.ಸತೀಶ್, ರಸಗೊಬ್ಬರ ಪೂರೈಕೆ ಮಾಡುವ ಕಂಪನಿಗಳ ಪ್ರತಿನಿಧಿಗಳು, ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-20-588671944

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.