ಕಾರವಾರ: ‘ಗ್ರಾಮೀಣ ಪ್ರದೇಶದ ಜನರು ಸೇರಿದಂತೆ ಜಿಲ್ಲೆಯ ಎಲ್ಲರಿಗೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಕಾರವಾರ ವೈದ್ಯಕೀಯ ಶಿಕ್ಷಣ ಸಂಸ್ಥೆ ಬದ್ಧವಾಗಿದೆ’ ಎಂದು ಕ್ರಿಮ್ಸ್ ನಿರ್ದೇಶಕಿ ಡಾ.ಪೂರ್ಣಿಮಾ ಆರ್.ಟಿ ಹೇಳಿದರು.

ತಾಲ್ಲೂಕಿನ ಅಂಗಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ಕ್ರಿಮ್ಸ್ನ ಸಮುದಾಯ ವೈದ್ಯಕೀಯ ವಿಭಾಗ ಹಾಗೂ ಅಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

‘ಕ್ರಿಮ್ಸ್ ಸ್ಥಾಪನೆ ನಂತರ ಆರೋಗ್ಯ ಸೇವೆಗಳಲ್ಲಿ ಸುಧಾರಣೆ ಕಂಡಿದೆ. ನುರಿತ ವೈದ್ಯರು, ವೈದ್ಯಕೀಯ ಪದವೀಧರರು ಕೇವಲ ಕಾಲೇಜಿನಲ್ಲಿ ಮಾತ್ರವಲ್ಲದೆ ಗ್ರಾಮಿಣ ಪ್ರದೇಶಗಳಿಗೂ ತೆರಳಿ ತಪಾಸಣೆ ನಡೆಸುವ ಜೊತೆಗೆ ಚಿಕಿತ್ಸೆ ಒದಗಿಸುತ್ತಿದ್ದಾರೆ’ ಎಂದು ಅವರು ಹೇಳಿದರು.

ಶಿಬಿರದಲ್ಲಿ 210 ಮಂದಿ ಉಚಿತ ಆರೋಗ್ಯ ಸೇವೆಯ ಸೌಲಭ್ಯವನ್ನು ಪಡೆದುಕೊಂಡರು. ಕ್ರಿಮ್ಸ್ನ 12 ವಿಭಾಗಗಳ ತಜ್ಞ ವೈದ್ಯರು ಸಮಾಲೋಚನೆ, ರೋಗನಿರ್ಣಯ, ಚಿಕಿತ್ಸೆ, ಆರೋಗ್ಯ ಶಿಕ್ಷಣ ಹಾಗೂ ಅಗತ್ಯವಿದ್ದ ಕಡೆಗಳಲ್ಲಿ ಹೆಚ್ಚಿನ ಚಿಕಿತ್ಸೆಗೆ ಶಿಫಾರಸು ಸೇವೆಗಳನ್ನು ಒದಗಿಸಿದರು.

ರಾಷ್ಟ್ರೀಯ ವೈದ್ಯಕೀಯ ಆಯೋಗವು, ಎಂಬಿಬಿಎಸ್ ವಿದ್ಯಾರ್ಥಿಗಳಿಗಾಗಿ ರೂಪಿಸಿರುವ ಕುಟುಂಬ ದತ್ತು ಕಾರ್ಯಕ್ರಮದ ಭಾಗವಾಗಿ ಶಿಬಿರ ಆಯೋಜಿಸಲಾಗಿತ್ತು.

ಕ್ರಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ.ನರೇಶ್ ಪಾವಸ್ಕರ್, ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ಹೇಮಗಿರಿ ಕೆ., ಸ್ಥಾನಿಕ ವೈದ್ಯಾಧಿಕಾರಿ ಡಾ.ವಿಜಯರಾಜ್ ಎನ್. ಸಮುದಾಯ ವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ರಚನಾ ಎ.ಆರ್, ಅಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುದೀತಾ ಪೆಡೇಕರ್, ಡಾ.ದೇಸಾಯಿ, ಡಾ.ಮಾಲತೇಶ್ ಉಚಿಡಿ, ಡಾ.ಗಿರೀಶ್ ಎಚ್.ಒ, ಆಸ್ಪತ್ರೆಯ ಸಿಬ್ಬಂದಿ, ರೋಗಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-20-1945916056

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.