ಕಾರವಾರ: ‘ಪದೇ ಪದೇ ವಿದ್ಯುತ್ ವ್ಯತ್ಯಯದ ದೂರು ಹೆಚ್ಚುತ್ತಿದೆ. ಹೆಸ್ಕಾಂ ಅಧಿಕಾರಿಗಳ ಕಾರ್ಯವೈಖರಿ ಬದಲಾಗಬೇಕು. ಇಲ್ಲದಿದ್ದರೆ ಜನರ ಅಸಹನೆ ಹೆಚ್ಚುತ್ತದೆ’ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ ನಾಯ್ಕ ಎಚ್ಚರಿಸಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಹೆಸ್ಕಾಂ ವಿರುದ್ಧ ಸಾರ್ವಜನಿಕರ ದೂರುಗಳು ಹೆಚ್ಚುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

‘ಬಡವರಿಗೆ ನೆರವಾಗಲು ರಾಜ್ಯ ಸರ್ಕಾರ 200 ಯುನಿಟ್ವರೆಗೆ ಉಚಿತ ವಿದ್ಯುತ್ ಒದಗಿಸುವ ಗೃಹಜ್ಯೋತಿ ಯೋಜನೆ ಪರಿಚಯಿಸಿದೆ. ಆದರೆ, ಸರಿಯಾಗಿ ವಿದ್ಯುತ್ ಪೂರೈಕೆ ಮಾಡದೆ ಪದೇ ಪದೇ ವ್ಯತ್ಯಯ ಉಂಟಾಗುತ್ತಿರುವುದರಿಂದ ಅಧಿಕಾರಿಗಳು ಟೀಕೆಗೆ ಗುರಿಯಾಗುತ್ತಿದ್ದೀರಿ’ ಎಂದರು.

‘ನಿರಂತರವಾಗಿ ವಿದ್ಯುತ್ ಪೂರೈಕೆ ಮಾಡಲು ಅಗತ್ಯವಿರುವ ಕಾರ್ಯಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸಬೇಕು. ವಿದ್ಯುತ್ ತಂತಿಗಳ ಮೇಲಿರುವ ಮರದ ಕೊಂಬೆಗಳು ಮತ್ತು ಅಪಾಯಕಾರಿ ಮರಗಳನ್ನು ತೆರವುಗೊಳಿಸಬೇಕು’ ಎಂದರು.

ತಾಂತ್ರಿಕ ಕಾರಣಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗದಿರುವ ಪ್ರಕರಣಗಳಲ್ಲಿರುವ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಪಡಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಸ್ವ–ಉದ್ಯೋಗ ಕೈಗೊಳ್ಳಲು ಅನುಕೂಲವಾಗುವಂತಹ ತರಬೇತಿ ಕಾರ್ಯಕ್ರಮಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಯೋಜಿಸಲು ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

‘ಗೃಹಜ್ಯೋತಿ ಯೋಜನೆಯಡಿ ₹582.92 ಕೋಟಿ, ಗೃಹಲಕ್ಷ್ಮಿ ಯೋಜನೆಯಡಿ ₹1,828.28 ಕೋಟಿ, ಅನ್ನಭಾಗ್ಯ ಯೋಜನೆಯಡಿ ₹152.51 ಕೋಟಿ, ಯುವನಧಿ ಯೋಜನೆಯಡಿ ₹22 ಕೋಟಿ ಮತ್ತು ಶಕ್ತಿ ಯೋಜನೆಯಡಿ ₹559.93 ಕೋಟಿಯ ನೆರವನ್ನು ಒದಗಿಸಲಾಗಿದೆ’ ಎಂದರು.

ಪ್ರಾಧಿಕಾರದ ನಾಗರಾಜ ಮುರ್ಡೆಶ್ವರ, ಜನಾರ್ಧನ ದೇವಾಡಿಗ, ಪುರುಷೋತ್ತಮ ನಾಯ್ಕ, ರಾಜೇಂದ್ರ ರಾಣೆ, ಪಾಂಡುರಂಗ ಗೌಡ, ರಿಯಾಜ್ ಬಾಬುಸಾಬ್, ಸುಮಾ ಉಗ್ರಾಣಕರ್, ರಾಜಶೇಖರ್ ಹಿರೇಮಠ, ದೇವಿದಾಸ ಶಾನುಭಾಗ, ಅಣ್ಣಪ್ಪ ನಾಯ್ಕ, ರಾಜು ನಾಯ್ಕ, ಅಶೋಕ ಗೌಡ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-20-682793085

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.