ಕಾರವಾರ: ‘ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ಗಳಲ್ಲಿ ಸ್ಥಳಾವಕಾಶ ಕೊರತೆ ಕಂಡುಬರುತ್ತಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸ ಕಟ್ಟಡಗಳ ನಿರ್ಮಾಣ ತ್ವರಿತಗೊಳಿಸಬೇಕು’ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷ ಟಿ.ಶ್ಯಾಮ್ ಭಟ್ ಸೂಚಿಸಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಮಾನವ ಹಕ್ಕುಗಳ ಉಲ್ಲಂಘನೆ ಕುರಿತ ಪ್ರಕರಣಗಳ ವಿಚಾರಣೆ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು.

‘ಜಿಲ್ಲೆಯ ವಿವಿಧೆಡೆ ಪರಿಶೀಲನೆ ಕೈಗೊಂಡ ಸಂದರ್ಭದಲ್ಲಿ ಹಾಸ್ಟೆಲ್ಗಳಲ್ಲಿ ಸ್ಥಳಾವಕಾಶದ ಕೊರತೆ ಇರುವ ಬಗ್ಗೆ ದೂರು ಬಂದಿವೆ. ಹೊಸದಾಗಿ ನಿರ್ಮಾಣವಾಗುತ್ತಿರುವ ಪಕ್ಕದ ಕಟ್ಟಡಕ್ಕೆ ಅಗತ್ಯ ಸಂಖ್ಯೆಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಕ್ರಮವಹಿಸಿ’ ಎಂದರು.

‘ಕ್ರಿಮ್ಸ್ನಲ್ಲಿ ರೇಡಿಯಾಲಜಿಸ್ಟ್ ಹುದ್ದೆಯನ್ನು ಭರ್ತಿ ಮಾಡಬೇಕು. ಜಿಲ್ಲಾ ಕಾರಾಗೃಹ ನವೀಕರಣ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಬೇಕು’ ಎಂದರು.

ಕ್ರಿಮ್ಸ್ನಲ್ಲಿ ಮಾನವ ಹಕ್ಕು ಉಲ್ಲಂಘನೆ ಪ್ರಕರಣ ಹೆಚ್ಚುತ್ತಿದೆ ಎಂದು ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ, ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರ ಸ್ಥಗಿತಗೊಂಡಿರುವುದರಿಂದ ವೃದ್ಧರಿಗೆ ಸಮಸ್ಯೆಯಾಗಿದೆ ಎಂದು ಮಾಹಿತಿ ಹಕ್ಕು ಹೋರಾಟಗಾರ ಬಾಬು ಅಂಬಿಗ ದೂರು ನೀಡಿದರು. ಜಮೀನು ವಿವಾದ, ಪೊಲೀಸರಿಂದ ಹಲ್ಲೆ ಸೇರಿದಂತೆ 10ಕ್ಕೂ ಹೆಚ್ಚು ದೂರುಗಳು ಸಲ್ಲಿಕೆಯಾದವು.

‘ಸರ್ಕಾರ ಜಾರಿಗೆ ತರುವ ಜನೋಪಯೋಗಿ ಯೋಜನೆಗಳು ಮತ್ತು ಸರ್ಕಾರಿ ಸೇವೆಗಳನ್ನು ಅಧಿಕಾರಿಗಳು ಅನಗತ್ಯ ವಿಳಂಬಕ್ಕೆ ಆಸ್ಪದ ನೀಡದೇ ಸಾರ್ವಜನಿಕರಿಗೆ ಒದಗಿಸಬೇಕು. ಯಾವುದೇ ಒತ್ತಡದಲ್ಲಿದ್ದರೂ ಕಚೇರಿಗೆ ಆಗಮಿಸುವ ಸಾರ್ವಜನಿಕರೊಂದಿಗೆ ಸೌಜನ್ಯದೊಂದಿಗೆ ವರ್ತಿಸಿ ಅವರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು’ ಎಂದು ಆಯೋಗದ ಅಧ್ಯಕ್ಷರು ಸೂಚಿಸಿದರು.

ಆಯೋಗದ ನ್ಯಾಯಾಂಗ ಸದಸ್ಯ ಎಸ್.ಕೆ. ವಂಟಿಗೋಡಿ ಮಾತನಾಡಿ, ‘ಪ್ರತಿಯೊಬ್ಬ ವ್ಯಕ್ತಿಗೂ ಉತ್ತಮ ಜೀವನ ನಿರ್ವಹಣೆಗೆ ಸಮಾನ ಅವಕಾಶಗಳು ದೊರೆಯಬೇಕು ಎನ್ನುವುದು ಆಯೋಗದ ಉದ್ದೇಶವಾಗಿದ್ದು, ಆಯೋಗದಲ್ಲಿ ಸಲ್ಲಿಕೆಯಾಗುವ ದೂರುಗಳಲ್ಲಿ ಪೊಲೀಸ್ ಇಲಾಖೆಗೆ ಸಂಬಂಧಿಸಿದ ದೂರುಗಳು ಅಧಿಕವಾಗಿದೆ’ ಎಂದರು.

ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ದಿಲೀಷ್ ಶಶಿ, ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-20-1909414929

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.