ಕಾರವಾರ: ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷ ಟಿ.ಶ್ಯಾಮ ಭಟ್ ಮತ್ತು ಸದಸ್ಯ ಎಸ್.ಕೆ.ವಂಟಿಗೋಡಿ ಅವರು ಮಂಗಳವಾರ ನಗರದಲ್ಲಿರುವ ವಿದ್ಯಾರ್ಥಿ ವಸತಿ ನಿಲಯಗಳು ಸೇರಿದಂತೆ ವಿವಿಧೆಡೆ ಪರಿಶೀಲನೆ ಕೈಗೊಂಡರು.

ಹಿಂದುಳಿದ ವರ್ಗಗಳ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಬಳಿಕ ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿ, ಆಸ್ಪತ್ರೆಯಲ್ಲಿರುವ ಸೌಕರ್ಯಗಳನ್ನು ಪರಿಶೀಲಿಸಿದರು.

ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ, ಕೈದಿಗಳ ಕುಂದು ಕೊರತೆಗಳನ್ನು ಆಲಿಸಿದರು. ಜಿಲ್ಲಾ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ, ನಿಲ್ದಾಣದಲ್ಲಿ ಸ್ವಚ್ಛತೆ ಮತ್ತು ಶೌಚಾಲಯಗಳ ಸ್ಥಿತಿಗತಿ ಬಗ್ಗೆ ಪರಿಶೀಲಿಸಿ, ನಿಲ್ದಾಣದ ಆವರಣದಲ್ಲಿನ ಮಳಿಗೆಗಳಲ್ಲಿ ಮಾರಾಟ ಮಾಡುವ ಆಹಾರ ಪದಾರ್ಥಗಳ ಗುಣಮಟ್ಟ ಪರಿಶೀಲಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಂ.ಎಸ್.ಅಲ್ಲಾಭಕ್ಷ್, ತಾಲ್ಲೂಕು ಪಂಚಾಯಿತಿ ಇಒ ವೀರನಗೌಡ ಏನಗಗೌಡರ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ವೈ.ಕೆ.ಉಮೇಶ, ಜಿಲ್ಲಾ ಪರಿಸರ ಅಧಿಕಾರಿ ಬಿ.ಕೆ.ಸಂತೋಷ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-20-1434923940

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.