ಕಾರವಾರ: ‘ರಾಜ್ಯ ಸರ್ಕಾರದ ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್ನ ಹಿರಿಯ ಸದಸ್ಯರಾಗಿರುವ ಐವಾನ್ ಡಿಸೋಜಾ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕು’ ಎಂದು ಕ್ಯಾಥೋಲಿಕ್ ಅಸೋಸಿಯೆಶನ್ನ ಜಿಲ್ಲಾ ಘಟಕ ಒತ್ತಾಯಿಸಿದೆ.

‘ಕಾನೂನು ತಜ್ಞರಾಗಿರುವ ಜೊತೆಗೆ ಸಂವಿಧಾನ ಮೌಲ್ಯಗಳನ್ನು ಎತ್ತಿ ಹಿಡಿಯುವ ವ್ಯಕ್ತಿತ್ವವುಳ್ಳ, ಕಾಂಗ್ರೆಸ್ ಪಕ್ಷದಲ್ಲಿ ಹಲವು ದಶಕಗಳಿಂದ ಸಕ್ರೀಯರಾಗಿರುವ ಐವಾನ್ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಕಾಂಗ್ರೆಸ್ ಪಕ್ಷ ಅರ್ಹ ವ್ಯಕ್ತಿಗೆ ಅವಕಾಶ ಕಲ್ಪಿಸಬೇಕು’ ಎಂದು ಅಸೋಸಿಯೇಶನ್ನ ಜಿಲ್ಲಾ ಘಟಕದ ಅಧ್ಯಕ್ಷ ಜಾರ್ಜ್ ಫರ್ನಾಂಡಿಸ್ ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

‘ಕ್ಯಾಥೋಲಿಕ್ ಕ್ರೈಸ್ತ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ಸಿಗಬೇಕು. ಕರಾವಳಿ ಭಾಗದ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿರುವ ಐವಾನ್ ಸಚಿವ ಸ್ಥಾನ ಪಡೆಯಲು ಅರ್ಹತೆ ಹೊಂದಿದ್ದು, ಅದನ್ನು ಪಕ್ಷವು ಪರಿಗಣಿಸಬೇಕು. ಈ ಕುರಿತು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಅಸೋಸಿಯೆಶನ್ನಿಂದ ಪತ್ರ ಬರೆದು ಮನವಿ ಮಾಡಲಾಗಿದೆ’ ಎಂದರು.

‘ಪಕ್ಷ ಸಂಘಟನೆ ಜೊತೆಗೆ ಸಾಮಾಜಿಕವಾಗಿ ಹಿಂದುಳಿದವರ ಪರ ನಿರಂತರ ಹೋರಾಟ ನಡೆಸುವ ಮೂಲಕ ಐವಾನ್ ರಾಜ್ಯದಲ್ಲಿ ಪ್ರಭಾವಿ ರಾಜಕೀಯ ನಾಯಕರಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ಅವರಿಗೆ ಹುದ್ದೆ ನೀಡುವುದರಿಂದ ಪಕ್ಷಕ್ಕೂ, ಅವರ ಅನುಭವದಿಂದಆಡಳಿತಕ್ಕೂ ಅನುಕೂಲವಾಗಲಿದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-26-1684014917

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.