ಕಾರವಾರ: ‘ಜಲಜೀವನ್ ಮಿಷನ್ ಯೋಜನೆ (ಜೆಜೆಎಂ) ಕಾಮಗಾರಿ ಕೇವಲ ಕಡತಕ್ಕೆ ಸೀಮಿತವಾಗಿಸುವ ಕೆಲಸದಿಂದ ಅಧಿಕಾರಿಗಳು ಹೊರಗೆ ಬರಬೇಕು’ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಎಚ್ಚರಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜನಜೀವನ್ ಮಿಷನ್ ಯೋಜನೆ ಅಡಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು ಸಮರ್ಪಕವಾಗಿ ಕೆಲಸ ಪೂರ್ಣಗೊಳಿಸದ ಅಧಿಕಾರಿಗಳ ವಿರುದ್ಧ ಹರಿಹಾಯ್ದರು.

‘ಅರ್ಧಕ್ಕೆ ನಿಂತ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಜೆಜೆಎಂ ಯೋಜನೆಯ ಗಂಭೀರತೆ ಕಳೆಯದಿರಿ. ಗುಣಮಟ್ಟದ ಕೆಲಸ ಮಾಡಿ. ನೀರು ಪ್ರತಿ ಮನೆಗೆ ತಲುಪಿಸಲು ಕಾಳಜಿವಹಿಸಿ’ ಎಂದರು.

‘ಸುದೀರ್ಘ ಅವಧಿಯಿಂದ ನೀರಿನ ಕೊರತೆ ಎದುರಿಸುತ್ತಿರುವ ಗ್ರಾಮಗಳನ್ನು ಗುರುತಿಸಿ, ಅಂತಹ ಕಡೆಗಳಲ್ಲಿ ನೀರಿನ ಸಮಸ್ಯೆ ಪರಿಹರಿಸಲು ಶಾಶ್ವತ ಯೋಜನೆ ರೂಪಿಸುವ ಕೆಲಸವಾಗಬೇಕು. ಜೆಜೆಎಂನ ಮೊದಲ ಹಂತದಲ್ಲಿ ಬಾಕಿ ಉಳಿದಿದ್ದ 248 ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು’ ಎಂದು ಸೂಚಿಸಿದರು.

‘ಜೆಜೆಎಂ ಯೋಜನೆಯಡಿ 965 ಕಾಮಗಾರಿಗೆ ಕಾರ್ಯಾದೇಶ ನೀಡಲಾಗಿದೆ. ಜಿಲ್ಲೆಯ 100 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೀರಿನ ತೀವ್ರ ಕೊರತೆ ಉಂಟಾಗುತ್ತಿದೆ. ಮೂರು ವರ್ಷಗಳ ಮಾಹಿತಿ ಕ್ರೋಢೀಕರಿಸಿ ಇದನ್ನು ದೃಢಪಡಿಸಿಕೊಳ್ಳಲಾಗಿದೆ. 31 ಗ್ರಾಮ ಪಂಚಾಯಿತಿ ವ್ಯಾಪ್ತಿಯ 68 ಕಡೆಗಳಲ್ಲಿ ಟ್ಯಾಂಕರ್ ನೀರು ಪೂರೈಸಲಾಗುತ್ತಿದೆ. ಘಟ್ಟದ ಮೇಲಿನ ಭಾಗದಲ್ಲಿ ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆ ಪಡೆದು ನೀರು ಪೂರೈಸಲಾಗುತ್ತಿದೆ. ಕರಾವಳಿ ಭಾಗದಲ್ಲಿ ಉಪ್ಪು ನೀರಿನ ಸಮಸ್ಯೆ ಎದುರಾಗುತ್ತಿದೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ.ದಿಲೀಷ್ ಶಶಿ ಹೇಳಿದರು.

ಹಳಿಯಾಳದಲ್ಲಿ ಕಬ್ಬು ಬೆಳೆ ಪ್ರದೇಶ ವಿಸ್ತರಣೆ ಆಗುತ್ತಿರುವುದರಿಂದ ಅಂತರ್ಜಲ ಮಟ್ಟ ಕುಸಿತ ಕಾಣುತ್ತಿದೆ. ಕೊಳವೆಬಾವಿ ಕೊರೆತ ಹೆಚ್ಚಿರುವುದರಿಂದಲೂ ಸಮಸ್ಯೆ ಬಿಗಡಾಯಿಸಿದೆ ಎಂದು ಅಂತರ್ಜಲ ಇಲಾಖೆಯ ಭೂವಿಜ್ಞಾನಿ ತಿಳಿಸಿದರು.

ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-20-1326721849

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.