ಕಾರವಾರ: ‘ಅಂಗಡಿ ಮುಂಗಟ್ಟುಗಳು, ಖಾಸಗಿ ಕಚೇರಿಗಳಿಗೆ ಅಳವಡಿಸುವ ನಾಮಫಲಕಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡದಿದ್ದರೆ ಹೋರಾಟ ನಡೆಸಲಾಗುವುದು’ ಎಂದು ಕರ್ನಾಟಕ ರಕ್ಷಣಾ ವೇದಿಕೆಯ (ಟಿ.ನಾರಾಯಣ ಗೌಡ ಬಣ) ಜಿಲ್ಲಾ ಘಟಕದ ಅಧ್ಯಕ್ಷ ಅರುಣ ಹರ್ಕಡೆ ಹೇಳಿದರು.

ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಷ್ಟ್ರೀಕೃತ ಬ್ಯಾಂಕಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ಕನ್ನಡ ಕಲಿಕೆ ಕಡ್ಡಾಯಗೊಳಿಸಬೇಕು. ಸ್ಥಳೀಯರೊಂದಿಗೆ ಸಂವಹನ ನಡೆಸುವಾಗ ಕನ್ನಡ ಮಾತನಾಡಲು ಸೂಚನೆ ನೀಡಬೇಕು’ ಎಂದು ಒತ್ತಾಯಿಸಿದರು.

‘ಜಿಲ್ಲೆಯಲ್ಲಿ ನೌಕಾದಳ, ಅಣು ವಿದ್ಯುತ್ ಸ್ಥಾವರದಂತಹ ರಾಷ್ಟ್ರೀಯ ಯೋಜನೆಗಳಿದ್ದರೂ ಸ್ಥಳೀಯರಿಗೆ ಉದ್ಯೋಗ ಸಿಗುತ್ತಿಲ್ಲ. ಈ ತಾರತಮ್ಯ ನೀತಿ ವಿರುದ್ಧ ಶೀಘ್ರದಲ್ಲಿ ಧ್ವನಿ ಎತ್ತಲಿದ್ದೇವೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬದ ವಿರುದ್ಧವೂ ಹೋರಾಟ ನಡೆಸಲಾಗುವುದು’ ಎಂದರು.

ವಿನಾಯಕ ನಾಯಕ, ನಾಗರಾಜ ನಾಯ್ಕ, ನೀಲಾ ಮಾದರ, ಮಂಜುನಾಥ ನಾಯಕ, ತಿಮ್ಮಪ್ಪ ನಾಯ್ಕ, ಬಸವರಾಜ ಬೆಂಡಿಗೇರಿಮಠ, ರಾಜಾ ನಾಯ್ಕ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-20-458785024

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.