ಕಾರವಾರ: ಕೇರಳ ಚುನಾವಣೆ ಹಿನ್ನೆಲೆಯಲ್ಲಿ ಕಾರವಾರ, ಅಂಕೋಲಾ ರೈಲು ನಿಲ್ದಾಣಗಳಲ್ಲಿ ಅಬಕಾರಿ ಅಧಿಕಾರಿಗಳ ತಂಡ ಕಳೆದ ಎರಡು ದಿನಗಳಿಂದ ತಪಾಸಣೆ ಚುರುಕುಗೊಳಿಸಿವೆ.

‘ಗೋವಾದಿಂದ ರೈಲಿನ ಮೂಲಕ ಅಕ್ರಮವಾಗಿ ಮದ್ಯ ಸಾಗಾಟ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರ ಸೂಚನೆ ಆಧರಿಸಿ ತಪಾಸಣೆ ನಡೆಸಲಾಗುತ್ತಿದೆ. ತಪಾಸಣೆ ನಡೆಸಿದ ವೇಳೆ ಗೋವಾದ ಮಡಗಾಂವ್ನಿಂದ ಕೇರಳ ರಾಜ್ಯಕ್ಕೆ ತಲುಪುವ ಮಂಗಳ ಲಕ್ಷದ್ವೀಪ ಎಕ್ಸ್ಪ್ರೆಸ್ ರೈಲಿನ ಜನರಲ್ ಭೋಗಿಯಲ್ಲಿ 12 ಲೀಟರ್ ಬಿಯರ್ ಪತ್ತೆಯಾಗಿದೆ’ ಎಂದು ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

‘ಬಿಯರ್ ವಶಕ್ಕೆ ಪಡೆಯಲಾಗಿದೆ. ವಾರಸುದಾರರು ಯಾರೆಂಬುದು ಖಚಿತವಾಗಿಲ್ಲ. ಕೇರಳದತ್ತ ಸಂಚರಿಸುವ ಪ್ರತಿ ರೈಲುಗಳ ಮೇಲೆ ನಿಗಾ ಇರಿಸಲು ಪ್ರಯತ್ನಿಸಲಾಗುತ್ತಿದೆ’ ಎಂದು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-20-172874039

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.