ಕಾರವಾರ: ಭೂ ಮಾಪಕರ ಹೋರಾಟ ಹತ್ತಿಕ್ಕುವ ಸಲುವಾಗಿ ಪರವಾನಗಿ ಭೂ ಮಾಪಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸೂರಜ್ ತಲಗೇರಿ ಅವರನ್ನು ಅಮಾನತು ಮಾಡಿರುವುದನ್ನು ಖಂಡಿಸಿ ಸರ್ಕಾರಿ ಪರವಾನಗಿ ಭೂ ಮಾಪಕರ ಸಂಘದ ಜಿಲ್ಲಾ ಘಟಕದಿಂದ ಶುಕ್ರವಾರ ಭೂದಾಖಲೆಗಳ ಇಲಾಖೆಯ ಉಪನಿರ್ದೇಶಕ ಸಂದೀಪ ಉಪ್ಪಾರ ಅವರಿಗೆ ಮನವಿ ಸಲ್ಲಿಸಲಾಯಿತು.

‘ಸಂಘದ ಜಿಲ್ಲಾ ಘಟಕದ ಅಧ್ಯಕ್ಷರನ್ನು ಅಮಾನತುಗೊಳಿಸಿರುವ ಆದೇಶ ಹಿಂಪಡೆದು ಅವರಿಗೆ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕು. ನ್ಯಾಯಯುತ ಬೇಡಿಕೆಗಳನ್ನು ಮುಂದಿಟ್ಟು ಹೋರಾಟ ನಡೆಸುತ್ತಿರುವ ಭೂ ಮಾಪಕರ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು’ ಎಂದು ಒತ್ತಾಯಿಸಲಾಯಿತು.

‘ಕಳೆದ 80 ದಿನಗಳಿಂದ ಸಾಂವಿಧಾನಿಕ ಹಕ್ಕುಗಳಿಗಾಗಿ ಶಾಂತಿಯುತವಾಗಿ ಮುಷ್ಕರ ನಡೆಸುತ್ತಿದ್ದೇವೆ. ಮುಷ್ಕರ ನಿರತರನ್ನು ಬೆದರಿಸುವ ತಂತ್ರವಾಗಿ ಇಲಾಖೆ ಮತ್ತು ಜಿಲ್ಲಾಧಿಕಾರಿ ಕಚೇರಿ, ತಕ್ಷಣ ಕರ್ತವ್ಯಕ್ಕೆ ಹಾಜರಾಗದಿದ್ದರೆ ಜಿಲ್ಲೆಯ 80ಕ್ಕೂ ಅಧಿಕ ಪರವಾನಗಿ ಭೂಮಾಪಕರ ಪರವಾನಗಿ ರದ್ದುಪಡಿಸುವುದಾಗಿ ಕಾರಣ ಕೇಳುವ ನೋಟಿಸ್ ನೀಡುತ್ತಿದೆ. ಲಾಗಿನ್ಗಳು ನಿಷ್ಕ್ರಿಯಗೊಂಡಿರುವುದರಿಂದ ಹೊಸ ಅರ್ಜಿಗಳ ಹಂಚಿಕೆ ಆಗಿಲ್ಲ. ಆದರೂ, ನಮ್ಮಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ ಮತ್ತು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗಿದೆ ಎಂದು ಅಧಿಕಾರಿಗಳು ನೋಟಿಸ್ನಲ್ಲಿ ಉಲ್ಲೇಖಿಸಿದ್ದಾರೆ’ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸೂರಜ್ ತಲಗೇರಿ ಸುದ್ದಿಗೋಷ್ಠಿ ನಡೆಸಿ, ದೂರಿದರು.

‘ನಿಗದಿತ ಮಾಸಿಕ ವೇತನವಾಗಲಿ, ಆರೋಗ್ಯ ವಿಮೆ ಅಥವಾ ಭವಿಷ್ಯ ನಿಧಿಯಂತಹ ಮೂಲಭೂತ ಸೌಲಭ್ಯ ಇಲ್ಲ. ಇಲಾಖೆಯು ಕಡತಗಳಿಗೆ ನಿಗದಿಪಡಿಸಿರುವ ಅವೈಜ್ಞಾನಿಕ ಸೇವಾಧನ ಮಾತ್ರ ಸಿಗುತ್ತಿದ್ದು, ಮಾಡಿದ ಕೆಲಸಕ್ಕೆ ಹಣವೂ ಸರಿಯಾದ ಸಮಯಕ್ಕೆ ಪಾವತಿಯಾಗುತ್ತಿಲ್ಲ’ ಎಂದರು.

ಸಂಘದ ಪದಾಧಿಕಾರಿಗಳಾದ ಮಿಥುನ್ ನಾಯ್ಕ, ಗೋಪಾಲ ಗೌಡ, ರಮೇಶ, ಈಶ್ವರ್, ಮಲ್ಲಿಕಾ ನಾಯ್ಕ, ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-20-873112502

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.